ಕಣಿವೆಯಲ್ಲಿ ದಾಳಿಗೆ ಪತ್ರಕರ್ತರು, ವಿದ್ಯಾರ್ಥಿಗಳ ಬಳಕೆ

ಪಾಕ್‌ ಉಗ್ರ ಸಂಘಟನೆಗಳಿಂದ ಹೊಸ ಕುತಂತ್ರ; ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖ

Team Udayavani, May 7, 2022, 7:45 AM IST

ಕಣಿವೆಯಲ್ಲಿ ದಾಳಿಗೆ ಪತ್ರಕರ್ತರು, ವಿದ್ಯಾರ್ಥಿಗಳ ಬಳಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಮತ್ತು ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆಯ ಕಣ್ಗಾವಲಿನಿಂದ ಕಳವಳಕ್ಕೀಡಾಗಿರುವ ಪಾಕಿಸ್ತಾನವು, ತನ್ನ ಉದ್ದೇಶ ಈಡೇರಿಕೆಗಾಗಿ ಕಣಿವೆಯಲ್ಲಿನ ಪತ್ರಕರ್ತರು ಹಾಗೂ ವಿದ್ಯಾರ್ಥಿಗಳನ್ನು ಕೈಗೊಂಬೆಯಾಗಿಸಲು ಆರಂಭಿಸಿದೆ. ಇವರನ್ನು ಭಯೋತ್ಪಾದನೆಗೆ ನೇಮಕ ಮಾಡಿಕೊಂಡು, ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಸಲಾಗುತ್ತಿದೆ.

ಉಗ್ರ ಸಂಚು ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಸಲ್ಲಿಸಿರುವ 2 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ.

ಆಡಿಯೋ ರೆಕಾರ್ಡಿಂಗ್‌ಗಳು, ಬರಹಗಳು, ವಿಚಾರಣೆಯಿಂದ ಹೊರಬಂದ ಅಂಶಗಳನ್ನೆಲ್ಲ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಿರುವ ಎನ್‌ಐಎ, “ಉಗ್ರ ಸಂಘಟನೆಗಳಿಗಾಗಿ ಕೆಲಸ ಮಾಡುವ ಭೂಗತ ವ್ಯಕ್ತಿಗಳು ಈಗ ಐಎಸ್‌ಐ ಬೆಂಬಲಿತ ದಿ ರೆಸಿಸ್ಟೆಂಟ್‌ ಫ್ರಂಟ್‌(ಟಿಆರ್‌ಎಫ್)ನ ಹೈಬ್ರಿಡ್‌ ಭಯೋತ್ಪಾದಕರಾಗಿ ಬದಲಾಗಿದ್ದಾರೆ. ಅವರಿಗೆ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಪರ ಮೃದು ಧೋರಣೆಯುಳ್ಳವರು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂಥ ಕೆಲಸ ಕೊಡಲಾಗಿದೆ. ಪತ್ರಕರ್ತರು, ವಿದ್ಯಾರ್ಥಿಗಳಿಗೆ ಸಣ್ಣಮಟ್ಟಿನ ಶಸ್ತ್ರಾಸ್ತ್ರಗಳನ್ನು ನೀಡಿ ದಾಳಿ ಮಾಡಿಸಲಾಗುತ್ತದೆ’ ಎಂದು ಹೇಳಿದೆ.

ಪಾಕ್‌ನಿಂದಲೇ ಕಮಾಂಡ್‌:
ಕಣಿವೆಯಲ್ಲಿ ನಡೆಯುವ ಎಲ್ಲ ವಿಧ್ವಂಸಕ ಕೃತ್ಯಗಳೂ ಪಾಕಿಸ್ತಾನ ಮೂಲದ ಉಗ್ರ ಕಮಾಂಡರ್‌ಗಳ ಸೂಚನೆ ಮೇರೆಗೆ ನಡೆಯುತ್ತವೆ. ಇವರ ನಿರ್ದೇಶನದ ಅನ್ವಯ ಉಗ್ರ ಇಶ್ಫಾಕ್‌ ಅಮೀನ್‌ ವಾನಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಜೆಕೆ ಅಪ್ನಿ ಪಾರ್ಟಿ ನಾಯಕ ಅಲ್ತಾಫ್ ಬುಖಾರಿ, ಬಿಜೆಪಿಯ ಹೀನಾ ಬೇಗ್‌ ಸೇರಿದಂತೆ ಇತರೆ ಕಾರ್ಯಕರ್ತರನ್ನು ಹತ್ಯೆಗೈದಿದ್ದಾನೆ.

ಅಲ್ಲದೇ, ಕೋರ್ಟ್‌ ಸಂಕೀರ್ಣ, ಸಿಆರ್‌ಪಿಎಫ್ ನ ಕ್ಯಾಂಪ್‌ನಲ್ಲಿ ದಾಳಿಯನ್ನೂ ನಡೆಸಿದ್ದಾನೆ ಎಂದೂ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

2021ರ ಅಕ್ಟೋಬರ್‌-ನವೆಂಬರ್‌ ಅವಧಿಯಲ್ಲಿ ಟಿಆರ್‌ಎಫ್ ಉಗ್ರರು 40 ನಾಗರಿಕರನ್ನು ಹತ್ಯೆಗೈದಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.