ಬ್ರಿಟನ್ನಲ್ಲಿ ರಾಜಕೀಯ ಆಸರೆ ಕೋರಿರುವ ನೀರವ್ ಮೋದಿ:ವರದಿ
Team Udayavani, Jun 11, 2018, 10:50 AM IST
ಲಂಡನ್ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿ ತಲೆಮರೆಸಿಕೊಂಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ ಬ್ರಿಟನ್ಗೆ ಪಲಾಯನ ಮಾಡಿದ್ದು ಅಲ್ಲಿ ಆತ ರಾಜಕೀಯ ಆಸರೆಯನ್ನು ಕೋರಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ದೇಶದ ಎರಡನೇ ಅತೀ ದೊಡ್ಡ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿರುವ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಲಾಯ ನಡೆಸುತ್ತಿದೆ.
ನೀರವ್ ಮೋದಿ ಮತ್ತು ಆತನ ಚಿಕ್ಕಪ್ಪ ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ, ಕೆಲವು ಬ್ಯಾಂಕ್ ಅಧಿಕಾರಿಗಳ ಸಹಕಾರದಲ್ಲಿ, 13,000 ಕೋಟಿ ರೂ. ವಂಚಿಸಿರುವ ಪ್ರಕರಣ ಈ ವರ್ಷದ ಆದಿಯಲ್ಲಿ ಬೆಳಕಿಗೆ ಬಂದಿತ್ತು.
ನೀರವ್ ಮೋದಿ ಮತ್ತು ಆತನ ಚಿಕ್ಕಪ್ಪ ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುವ ಮುನ್ನವೇ ದೇಶದಿಂದ ಪಲಾಯನ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್