ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ
Team Udayavani, Mar 2, 2020, 4:21 PM IST
ಹೊಸದಿಲ್ಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸುವುದರೊಂದಿಗೆ, ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ.
ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿತ್ತು. ಇದರ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕ್ಷಮಾದಾನ ಅರ್ಜಿಯನ್ನೂ ತಿರಸ್ಕರಿಸಿದ್ದು, ಗಲ್ಲು ಶಿಕ್ಷೆ ಖಾಯಂ ಆಗಿದೆ.
ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಫೆ.17ರಂದು ಹೊಸ ಡೆತ್ ವಾರಂಟ್ ಹೊರಡಿಸಿದ್ದು, ಅದರಂತೆ ಮಾರ್ಚ್ ಮೂರು (ಮಂಗಳವಾರ) ಗಲ್ಲು ಶಿಕ್ಷೆ ಆಗಬೇಕಿದೆ. ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ, ಅಕ್ಷಯ್ ಕುಮಾರ್ ಗೆ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಇನ್ನು ಯಾವುದೇ ಅವಕಾಶ ಇಲ್ಲದಂತಾಗಿದೆ