ಸೇನೆಗೆ ಭಾರತದ ಇಂಜಿನ್ ಹಸ್ತಾಂತರ
Team Udayavani, Jul 29, 2018, 6:00 AM IST
ಚೆನ್ನೈ: ದೇಶೀಯವಾಗಿ ನಿರ್ಮಿಸಿದ ಎರಡು ಅಧಿಕ ಶಕ್ತಿಯ ಇಂಜಿನ್ಗಳನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸೇನೆಗೆ ಹಸ್ತಾಂತರಿಸಿದ್ದಾರೆ. ಇದನ್ನು ಅವಾಡಿಯ ಇಂಜಿನ್ ಫ್ಯಾಕ್ಟರಿ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲೇ ನಿರ್ಮಾಣ ಮಾಡಲಾಗಿದೆ. 1 ಸಾವಿರ ಅಶ್ವಶಕ್ತಿಯ ಇಂಜಿನ್ಗಳಾಗಿದ್ದು, ಇವುಗಳನ್ನು ಭೀಷ್ಮ ಹಾಗೂ ಅಜೇಯ ಟ್ಯಾಂಕ್ಗೆ ಅಳವಡಿಸಲಾಗುತ್ತದೆ.
ರಷ್ಯಾ ಒದಗಿಸಿದ ವಿನ್ಯಾಸವನ್ನು ಆಧರಿಸಿ ಇದನ್ನು ನಿರ್ಮಿಸಲಾಗಿದ್ದು, ಸಂಪೂರ್ಣ ಬಿಡಿಭಾಗಗಳನ್ನೂ ಭಾರತದಲ್ಲೇ ತಯಾರಿಸಲಾಗಿದೆ. ಈ ಹಿಂದೆ ಹಲವು ಬಿಡಿಭಾಗಗಳನ್ನು ರಷ್ಯಾದಿಂದ ತರಿಸಿಕೊಳ್ಳಲಾಗುತ್ತಿತ್ತು. ಈ ಹಿಂದೆ ಶೇ.73ರಷ್ಟು ಬಿಡಿಭಾಗಗಳನ್ನು ದೇಶದಲ್ಲಿ ತಯಾರಿಸಲಾಗುತ್ತಿತ್ತು. ದೇಶದಲ್ಲೇ ಬಿಡಿಭಾಗಗಳನ್ನು ತಯಾರಿಸುವುದರಿಂದ ಪ್ರತಿ ವರ್ಷ ಸರ್ಕಾರಕ್ಕೆ 80 ಕೋಟಿ ರೂ. ಉಳಿತಾಯವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್