ರಕ್ಷಣಾ ಸಚಿವೆಯಾಗಿ ನಿರ್ಮಲಾ ಪದಗ್ರಹಣ
Team Udayavani, Sep 8, 2017, 6:10 AM IST
ಹೊಸದಿಲ್ಲಿ: ದೇಶದ ಮೊತ್ತಮೊದಲ ಪೂರ್ಣಪ್ರಮಾಣದ ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹೊಣೆಯನ್ನು ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದ ಕೇಂದ್ರ ಸಚಿವ ಅರುಣ್ ಜೇಟಿÉ ಅವರಿಂದ ಅಧಿಕಾರ ಪಡೆದುಕೊಂಡ ನಿರ್ಮಲಾ ಅವರು, ತಾವು ದಿನದ 24 ಗಂಟೆಯೂ ರಕ್ಷಣಾ ಸಚಿವೆಯಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದಿದ್ದಾರೆ. “ಸೇನಾ ಸನ್ನದ್ಧತೆ, ರಕ್ಷಣಾ ಒಪ್ಪಂದಗಳ ತ್ವರಿತ ಅನುಷ್ಠಾನ, ಯೋಧರ ಕ್ಷೇಮಾಭಿವೃದ್ಧಿ ಹಾಗೂ ರಕ್ಷಣಾ ಸಾಮಗ್ರಿಗಳ ಉತ್ಪಾದನೆಯಲ್ಲಿ ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಒತ್ತು ಕೊಡುತ್ತೇನೆ’ ಎಂದೂ ಹೇಳಿದ್ದಾರೆ.
ಅಧಿಕಾರ ವಹಿಸುವ ಮುನ್ನ ಅವರ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಈ ವೇಳೆ ನಿರ್ಮಲಾ ಅವರ ಹೆತ್ತವರೂ ಉಪಸ್ಥಿತರಿದ್ದರು. ವಿಶೇಷವೆಂದರೆ, ಅಧಿಕಾರ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ನಿರ್ಮಲಾ ಅವರು 8,685 ನಿವೃತ್ತ ಯೋಧರು, ವಿಧವೆಯರು ಹಾಗೂ ಅವಲಂಬಿತರಿಗೆ ಸಶಸ್ತ್ರ ಪಡೆಯ ಧ್ವಜ ದಿನದ ನಿಧಿಯಿಂದ 13 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದರು. ಜತೆಗೆ, ರಕ್ಷಣಾ ಮಂತ್ರಿ ನಿವೃತ್ತ ಯೋಧರ ನಿಧಿಯಿಂದ ಹಣಕಾಸು ನೆರವಿಗೂ ಒಪ್ಪಿಗೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ