ಇನ್ನು ಮುಂದೆ ರಾತ್ರಿ ವೇಳೆ ರೈಲುಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡುವಂತಿಲ್ಲ…!


Team Udayavani, Apr 1, 2021, 3:33 PM IST

No charging of electronic devices on board trains at night: Railways as precaution against fire

ನವದೆಹಲಿ: ರೈಲುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ರಾತ್ರಿ 11 ಘಂಟೆಯಿಂದ ಬೆಳಿಗ್ಗೆ 5 ಘಂಟೆಯ ವರೆಗೆ ರೈಲಿನಲ್ಲಿ ಮೊಬೈಲ್ , ಲ್ಯಾಪ್ ಟಾಪ್ ಗಳನ್ನು ಚಾರ್ಜ್ ಮಾಡುವುದನ್ನು  ನಿಷೇಧಿಸುವ ಕುರಿತಾಗಿ ರೈಲ್ವೆ ಇಲಾಖೆ ನಿರ್ಧಾರ ಕೈಗೊಂಡಿದೆ.

ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ರೈಲ್ವೆ ಇಲಾಖೆ ಅಧಿಕಾರಿಗಳು ರೈಲಿನಲ್ಲಿ ರಾತ್ರಿ ವೇಳೆ ಪ್ರಯಾಣಿಕರು ಮೊಬೈಲ್ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು  ಚಾರ್ಜಿಗೆ ಹಾಕಿ ನಿದ್ರಿಸುವುದರಿಂದ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ನಿರ್ಧಾರ ವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇನ್ನು ರೈಲ್ವೆ ಪ್ರಯಾಣಿಕರು ರಾತ್ರಿ ಸಮಯದಲ್ಲಿ ಚಾರ್ಜಿಂಗ್ ಪಾಯಿಂಟ್ ಬಳಕೆಯನ್ನು ನಿರ್ಬಂಧಿಸುವುದು ಮಾತ್ರವಲ್ಲದೆ ಧೂಮಪಾನಿಗಳ ಮೇಲೆ ಕೂಡಾ ನಿಗಾ ಇಡಲು ರೈಲ್ವೆ ಇಲಾಖೆಯು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜ್ ಮಾಡಲು ಬಳಸುವ ಬೋರ್ಡ್‌ಗಳನ್ನು ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಸ್ವಿಚ್ ಆಫ್ ಮಾಡಲಾಗುತ್ತದೆ. ಇದು ಎಲ್ಲಾ ವಿಭಾಗದ ರೈಲ್ವೆಗಳಿಗೆ ಕೇಂದ್ರ ರೈಲ್ವೆ ಮಂಡಳಿಯ ಸೂಚನೆಯಾಗಿದೆ. ಈ ನಿಯಮವನ್ನು ಮಾರ್ಚ್ 16 ರಿಂದ ಜಾರಿಗೆ ತರಲು ಪ್ರಾರಂಭಿಸಿದ್ದೇವೆ ಎಂದು ಪಶ್ಚಿಮ ರೈಲ್ವೆಯ CPRO ಸುಮಿತ್ ಠಾಕೂರ್ ತಿಳಿಸಿದ್ದಾರೆ.

ಇನ್ನು ಈ ಸೂಚನೆಗಳು ಹೊಸದೇನೂ ಅಲ್ಲ, ಆದರೆ ರೈಲ್ವೆ ಮಂಡಳಿಯ ಹಿಂದಿನ ಆದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಇಲಾಖೆ ಮುಂದಾಗಿದೆ ಎಂದು ದಕ್ಷಿಣ ರೈಲ್ವೆ CPRO ಬಿ ಗುಗನೇಶನ್ ಹೇಳಿದ್ದಾರೆ.

2014 ರಲ್ಲಿ ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ನಂತರ, ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಚಾರ್ಜಿಂಗ್ ಸೇವೆಗಳನ್ನು ಸ್ವಿಚ್ ಆಫ್ ಮಾಡಲು ರೈಲ್ವೆ ಸುರಕ್ಷತಾ ಆಯುಕ್ತರು ಶಿಫಾರಸು ಮಾಡಿದ್ದರು. ಇದಾದ ಬಳಿಕ ಇತ್ತೀಚಿನ ದಿನಗಳಲ್ಲಿಯೂ ಇಂತಹ ಅಗ್ನಿ ಅವಘಡಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರೈಲ್ವೆ ಮಂಡಳಿ ಅಂತಿಮವಾಗಿ ಎಲ್ಲಾ ರೈಲು ವಲಯಗಳಿಗೆ ಈ ಆದೇಶಗಳನ್ನು ನೀಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

ಈ ನಡುವೆ ರೈಲಿನ  ಒಳಗೆ ಧೂಮಪಾನ ಮಾಡುವವರಿಗೆ  ರೈಲ್ವೆ ಕಾಯ್ದೆಯ ಸೆಕ್ಷನ್ 167 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಧೂಮಪಾನ ಮಾಡುವ ಪ್ರಯಾಣಿಕರಿಗೆ 100 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಲ್ಲದೇ ರೈಲುಗಳಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯ ಸೆಕ್ಷನ್ 164 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಪರಾಧಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ಅಥವಾ ದಂಡ ವಿಧಿಸಬಹುದು ಮತ್ತು ಸೆಕ್ಷನ್ 165 ರ ಅಡಿಯಲ್ಲಿ 500 ರೂ.ಗಳ ದಂಡವನ್ನು ವಿಧಿಸಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.