ಏಕರೂಪ ನಾಗರಿಕ ಸಂಹಿತೆ ನಿರ್ಧಾರವಿಲ್ಲ

Team Udayavani, Aug 21, 2018, 6:00 AM IST

24.jpg

ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿ ಭಾರತೀಯ ಕಾನೂನು ಆಯೋಗವು ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ. ಆ.31ರಿಂದ ಆಯೋಗದ ಮುಖ್ಯಸ್ಥ ಬಿ.ಎಸ್‌.ಚೌಹಾಣ್‌ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಸಾಲದು ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ ಬುಡಕಟ್ಟು ಜನಾಂಗದ ಪ್ರದೇಶಗಳಲ್ಲಿ ವೈಯಕ್ತಿಕ ಕಾನೂನು ರಕ್ಷಣೆಯ ಪ್ರಸ್ತಾಪವನ್ನು ಆರನೇ ಪರಿಚ್ಛೇದದಲ್ಲಿ ಮಾಡಲಾಗಿರುವು ದರಿಂದ, ಅದರ ಬಗ್ಗೆ ನಿರ್ಧಾರ ಕೈಗೊಳ್ಳ ಬೇಕಿರುವ ಅಡ್ಡಿಯೂ ಇದೆ. ಹೀಗಾಗಿ ಆಯೋಗ ಕೇವಲ ಕೆಲವು ವೈಯಕ್ತಿಕ ಕಾನೂನುಗಳಿಗೆ ತಿದ್ದುಪಡಿ ತರಲು ನಿರ್ಧರಿಸಿದೆ.

2016 ಜುಲೈನಲ್ಲಿ ಕಾನೂನು ಸಚಿವಾಲಯ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರು ವುದು ಸಾಧ್ಯವೇ ಎಂಬುದಾಗಿ ಪರಿಶೀಲಿ ಸುವಂತೆ ಆಯೋಗವನ್ನು ಕೇಳಿತ್ತು. ನಂತರ ಅಕ್ಟೋಬರ್‌ನಲ್ಲಿ ಸಾರ್ವಜನಿಕರ ಅಭಿಪ್ರಾ ಯವನ್ನೂ ಕೇಳಿತ್ತು. ತ್ರಿವಳಿ ತಲಾಖ್‌, ಮಹಿಳೆಯರಿಗೆ ಸ್ವತ್ತು ಹಕ್ಕು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರಶ್ನಾವಳಿ ಪ್ರಕಟಿಸಿ ಇದಕ್ಕೆ ಸಾರ್ವಜನಿಕರು ಉತ್ತರಿಸು ವಂತೆ ಕೋರಿತ್ತು. ಈ ಮಧ್ಯೆಯೇ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಬಿ.ಎಸ್‌.ಚೌಹಾಣ್‌ ಹೇಳಿದ್ದರೂ, ಅಭಿ ಪ್ರಾಯ ಪಡೆಯುವ ಪ್ರಕ್ರಿಯೆ 2018 ಮಾರ್ಚ್‌ವರೆಗೂ ಮುಂದುವರಿದಿತ್ತು. ಈ ಪ್ರತಿಕ್ರಿಯೆ ಆಧರಿಸಿ ಸಲಹೆಗಳು ಮತ್ತು ತಿದ್ದುಪಡಿ ಕರಡುಗಳನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಆ.31ರೊಳಗೆ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ಈ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆಸಬಹುದಾಗಿದೆ.

ಈ ಹಿಂದೆ, 6ನೇ ಪರಿಚ್ಛೇದದಲ್ಲಿ ವೈಯಕ್ತಿಕ ಕಾನೂನುಗಳಿಗೆ ವಿನಾಯಿತಿ ಇರುವುದರಿಂದ ಏಕರೂಪ ನಾಗರಿಕ ಸಂಹಿತೆಯೇ ಪರಿಹಾರ ವಾಗದು. ಆರನೇ ಪರಿಚ್ಛೇದವನ್ನು ಬದಿಗಿಟ್ಟು ಸಂವಿಧಾನಕ್ಕೆ ತಿದ್ದುಪಡಿ ತರಲಾಗದು ಎಂದು ಚೌಹಾಣ್‌ ತಿಳಿಸಿದ್ದರು. 

ಟಾಪ್ ನ್ಯೂಸ್

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತುNEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

Prime Minister will inaugurate Nalanda University

Nalanda university; ಇಂದು ಪ್ರಧಾನಿಯಿಂದ ನಳಂದಾ ವಿವಿ ಉದ್ಘಾಟನೆ

virat kohli

Virat Kohli; ಅತ್ಯಂತ ಬೆಲೆಬಾಳುವ ಸೆಲೆಬ್ರಿಟಿ ಪಟ್ಟಿ: ಅಗ್ರ ಸ್ಥಾನಕ್ಕೇರಿದ ಕೊಹ್ಲಿ!

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

11-yellapur

Yellapur: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.