ಮುಸ್ಲಿಮರಿಗೆ ಭೂಮಿ ನೀಡಬೇಕಾಗಿಲ್ಲ: ಸುಪ್ರೀಂಗೆ ಹಿಂದೂ ಮಹಾಸಭಾ ಅರ್ಜಿ

Team Udayavani, Dec 10, 2019, 2:04 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದೆ.

ನ.9ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠ 2.77 ಎಕರೆ ಜಮೀನು ರಾಮ ಲಲ್ಲಾನಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಅಯೋಧ್ಯೆ ಸುತ್ತಮುತ್ತ ಐದು ಎಕರೆ ಜಮೀನನ್ನು ಮುಸ್ಲಿಮರಿಗೆ ನೀಡಬೇಕೆಂದು ತೀರ್ಪು ನೀಡಿತ್ತು.

ಈಗ ಮಸೀದಿ ನಿರ್ಮಿಸಲು ಜಮೀನು ನೀಡುವುದನ್ನು ಪ್ರಶ್ನಿಸಿ ಇದೇ ಮೊದಲ ಬಾರಿಗೆ ಹಿಂದೂ ಸಮುದಾಯದಿಂದ ಅರ್ಜಿ ಸಲ್ಲಿಕೆಯಾಗಿದೆ. ತೀರ್ಪಿನಲ್ಲಿ ಉಲ್ಲೇಖವಾಗಿರುವಂತೆ ವಿವಾದಿತ ಜಮೀನಿನ ಆಸುಪಾಸು ಹಿಂದೂಗಳಿಗೆ ಸೇರಿದ್ದು ಎಂದಿರುವಾಗ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕವಾಗಿ ಐದು ಎಕರೆ ಜಮೀನು ನೀಡ ಬೇಕಾದ ಅಗತ್ಯವಿಲ್ಲ ಎಂದು ಹಿಂದೂ ಮಹಾಸಭಾದ ನ್ಯಾಯವಾದಿ ವಿಷ್ಣು ಶಂಕರ್‌ ಹೇಳಿದ್ದಾರೆ. ಈ ಅರ್ಜಿಯಿಂದಾಗಿ ನ.9ರ ತೀರ್ಪು ವಿರುದ್ಧ ಒಟ್ಟು 7 ಅರ್ಜಿಗಳು ಸಲ್ಲಿಕೆಯಾ ದಂತಾಗಿವೆ. ಈಗಾಗಲೇ ಮುಸ್ಲಿಂ ಸಮುದಾಯದಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...