ಅದ್ದೂರಿ ಹೊಸ ವರ್ಷ ಆಚರಣೆ ಬೇಡ: ಕೇಂದ್ರ ಸರಕಾರ ಮನವಿ
Team Udayavani, Dec 18, 2021, 7:00 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಅನಗತ್ಯ ಪ್ರಯಾಣ ಕೈಗೊಳ್ಳಬಾರದು. ಹೊಸ ವರ್ಷದ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಮನವಿ ಮಾಡಿದ್ದಾರೆ.
11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದುವರೆಗೆ 113 ಪ್ರಕರಣಗಳು ದೃಢಪಟ್ಟಿವೆ ಎಂದೂ ಅವರು ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರ ಸಂಜೆ ಅವರು ಪತ್ರಿಕಾಗೋಷ್ಠಿ ನಡೆಸಿ, ದೇಶದಲ್ಲಿ ಇದುವರೆಗೆ 101 ಒಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದರು. ಆದರೆ ರಾತ್ರಿಯ ವೇಳೆಗೆ ಹೊಸದಾಗಿ 12 ಪ್ರಕರಣಗಳು ದೃಢಪಟ್ಟು ಒಟ್ಟು ಸಂಖ್ಯೆ 113ಕ್ಕೇರಿದೆ.
20 ದಿನಗಳಲ್ಲಿ ದೈನಿಕ ಕೊರೊನಾ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆ ಇದ್ದರೂ ಹೊಸ ರೂಪಾಂತರಿ ಹಿನ್ನೆಲೆ ಯಲ್ಲಿ ಸೋಂಕು ಪ್ರತಿಬಂಧಕ ಕ್ರಮ ಅನುಸರಿ ಸುವುದು ಒಳ್ಳೆಯದು ಎಂದು ಲವ ಅಗರ್ವಾಲ್ ಹೇಳಿದ್ದಾರೆ. ಬೂಸ್ಟರ್ ಡೋಸ್ ಬಗ್ಗೆ ವಿಜ್ಞಾನಿಗಳು ಸಲಹೆ ನೀಡಲಿದ್ದಾರೆ ಎಂದು ನೀತಿ ಆಯೋಗದ ಡಾ| ವಿ.ಕೆ. ಪೌಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಂಗ್ಲಾದಲ್ಲಿ ಕಾಳಿ ಮಂದಿರ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್