ನಿಮ್ಮ ಹಕ್ಕನ್ನೂ ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಸ್ಸಾಂ ಜನರಿಗೆ ಪ್ರಧಾನಿ ಮೋದಿ ಅಭಯ
ಅಸ್ಸಾಂನ ನನ್ನ ಸಹೋದರ, ಸಹೋದರಿಯರಿಗೆ ನಾನು ಭರವಸೆ ನೀಡುತ್ತಿದ್ದೇನೆ
Team Udayavani, Dec 12, 2019, 10:58 AM IST
ನವದೆಹಲಿ:ಅಸ್ಸಾಂ ಜನರ ಅಧಿಕಾರ, ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಸ್ಸಾಂ ಜನರ ಸಂಸ್ಕೃತಿ, ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ, ಹಿಂಸಾಚಾರ ಕೈಬಿಡುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುತ್ತಿರುವ ಅಸ್ಸಾಂ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದು, ಮತ್ತೊಂದೆಡೆ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಹಿಂಸಾರೂಪಕ್ಕೆ ತಿರುಗಿದೆ.
ಇಂದು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಅಸ್ಸಾಂನ ನನ್ನ ಸಹೋದರ, ಸಹೋದರಿಯರಿಗೆ ನಾನು ಭರವಸೆ ನೀಡುತ್ತಿದ್ದೇನೆ. ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾದ ನಂತರ ಅಸ್ಸಾಂ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಅಭಯ ನೀಡಿದ್ದಾರೆ.
ನಿಮ್ಮ ಹಕ್ಕುಗಳನ್ನು ರಕ್ಷಿಸಲಾಗುವುದು ಎಂದು ಭರವಸೆ ನೀಡಿರುವ ಮೋದಿ, ನಿಮ್ಮ ಐಕ್ಯತೆ, ಸುಂದರವಾದ ಸಂಸ್ಕೃತಿ ಹಾಗೂ ಹಕ್ಕುಗಳನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಯಾವುದೇ ಭಯ, ಚಿಂತೆ ಬೇಕಾಗಿಲ್ಲ ಎಂದು ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್