ದಿಲ್ಲಿಯಲ್ಲಿ ಸೋನಿಯಾ, ರಾಹುಲ್ ಭೇಟಿ ಇಲ್ಲ : ಮಾಯಾವತಿ ಸ್ಪಷ್ಟನೆ
Team Udayavani, May 20, 2019, 11:16 AM IST
ಲಕ್ನೋ : ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು ದಿಲ್ಲಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಎಸ್ಪಿ ಅಧಿನಾಯಕಿ ಮಾಯಾವತಿ ಅವರು ‘ನನಗೆ ಯಾವುದೇ ದಿಲ್ಲಿ ಪ್ಲಾನ್ ಇಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
“ಮಾಯಾವತಿ ಜೀ ಅವರಿಗೆ ದಿಲ್ಲಿಯಲ್ಲಿ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ; ಆಕೆ ಲಕ್ನೋದಲ್ಲೇ ಇರುತ್ತಾರೆ’ ಎಂದು ಬಿಎಸ್ಪಿ ನಾಯಕ ಎಸ್ ಸಿ ಮಿಶ್ರಾ ಹೇಳಿದ್ದಾರೆ.
ಈ ಮೊದಲು ಕೆಲವು ಮೂಲಗಳು ಮಾಯಾವತಿ ಅವರು ಲೋಕಸಭಾ ಚುನಾವಣೆಗಳ ಫಲಿತಾಂಶ ಪ್ರಕಟನೆಗೆ ಮುನ್ನ ದಿಲ್ಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿ ಮಾಡಿದ್ದವು.
ಈ ನಡುವೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಈಗಾಗಲೇ ಬಿಜೆಪಿ ವಿರೋಧಿ ರಂಗವನ್ನು ರೂಪಿಸುವ ನಿಟ್ಟಿನಲ್ಲಿ ಮಾಯಾವತಿ ಮತ್ತು ಎಸ್ ಪಿ ಮುಖ್ಯಸ್ಥ ಅಖೀಲೇಶ್ ಯಾದವ್ ಅವರನ್ನು ಲಕ್ನೋದಲ್ಲಿ ಮೊನ್ನೆ ಶನಿವಾರ ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ