ಒಬಿಸಿ ಕೆನೆಪದರ ಏರಿಕೆ ಮಾಡುವ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ
Team Udayavani, Feb 8, 2023, 6:40 AM IST
ನವದೆಹಲಿ: ಇತರೆ ಹಿಂದುಳಿದ ವರ್ಗ(ಒಬಿಸಿ)ಗಳ ಕೆನೆಪದರದ ಈಗಿರುವ ವಾರ್ಷಿಕ ಆದಾಯ ಮಿತಿ 8 ಲಕ್ಷ ರೂ. ಮುಂದುವರಿಯಲಿದ್ದು, ಇದನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಲೋಕಸಭೆಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ತಿಳಿಸಿದೆ.
ಒಬಿಸಿ ಕೆನೆಪದರದ ಸ್ಥಿತಿಯನ್ನು ನಿರ್ಧರಿಸಲು ವಾರ್ಷಿಕ ಆದಾಯ ಮಿತಿಯನ್ನು ಇದುವರೆಗೆ ನಾಲ್ಕು ಬಾರಿ ಪರಿಷ್ಕರಿಸಲಾಗಿದೆ ಎಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಸಮಾಜ ಕಲ್ಯಾಣ ಸಚಿವ ವಿರೇಂದ್ರ ಕುಮಾರ್ ತಿಳಿಸಿದರು.
2014ರಲ್ಲಿ ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. ಇದೀಗ 654 ವೈದ್ಯಕೀಯ ಕಾಲೇಜುಗಳಿದ್ದು, ಕಾಲೇಜುಗಳ ಸಂಖ್ಯೆಯಲ್ಲಿ ಶೇ.69ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
1955ರ ಪೌರತ್ವ ಕಾಯಿದೆಯ ಅನುಸಾರ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡಲು 31 ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ್ ರೈ ಮಾಹಿತಿ ನೀಡಿದರು.
ಇನ್ನೊಂದೆಡೆ, 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಗಳಲ್ಲಿ 30 ನಾಗರಿಕರು ಹಾಗೂ 31 ಭದ್ರತಾ ಪಡೆಯ ಸಿಬ್ಬಂದಿ ಅಸುನೀಗಿದ್ದು, 221 ಮಂದಿ ಗಾಯಗೊಂಡಿದ್ದಾರೆ ಎಂದು ರೈ ತಿಳಿಸಿದರು.
ಅಕ್ರಮ ಲೋನ್ ಆ್ಯಪ್ ಗಳ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 859.15 ಕೋಟಿ ರೂ. ಮೌಲ್ಯದ ಆರೋಪಿತ ವ್ಯಕ್ತಿಗಳು ಮತ್ತು ಕಂಪನಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೇ 1999ರ ವಿದೇಶಿ ವಿನಿಮಯ ಕಾಯ್ದೆ ಅಡಿ 289.28 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಭಾಗವತ್ ಕರಾಡ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ
ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕ
ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ
ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ
MUST WATCH
ಹೊಸ ಸೇರ್ಪಡೆ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್
ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!