ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಜಾ
Team Udayavani, May 4, 2023, 6:55 AM IST
ರಾಂಚಿ: ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮೋದಿ ಉಪನಾಮ ಪ್ರಕರಣದಲ್ಲಿ ಮತ್ತೆ ಹಿನ್ನಡೆಯಾಗಿದೆ. ಝಾರ್ಖಂಡ್ನ ವಿಶೇಷ ಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಹಾಜರಾತಿಯಿಂದ ವಿನಾಯತಿ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
“ಮಧ್ಯಾಂತರ ರಕ್ಷಣೆಯನ್ನು ಈ ಹಂತದಲ್ಲಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಲಾಗಿದೆ,’ ಎಂದು ನ್ಯಾಯಪೀಠ ಹೇಳಿದೆ. ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ರ್ಯಾಲಿ ವೇಳೆ “ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿರುತ್ತದೆ?’ ಎಂದು ಕೇಳಿದ್ದರ ವಿರುದ್ಧ ರಾಂಚಿಯಲ್ಲಿ ದೂರು ದಾಖಲಿಸಿದ್ದರು. ಮಂಗಳವಾರ ಗುಜರಾತ್ ಹೈಕೋರ್ಟ್ನಲ್ಲಿ ಮಧ್ಯಾಂತರ ತಡೆಯಾಜ್ಞೆ ಕೋರಿದ್ದ ಅರ್ಜಿಯೂ ತಿರಸ್ಕೃತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!