ನೋಯ್ಡಾ ಮೆಟ್ರೋ ಆಸ್ಪತ್ರೆಯಲ್ಲಿ ಭಾರೀ ಬೆಂಕಿ: ರೋಗಿಗಳ ರಕ್ಷಣೆ
Team Udayavani, Feb 7, 2019, 10:08 AM IST
ಹೊಸದಿಲ್ಲಿ : ನೋಯ್ಡಾ ಸೆಕ್ಟರ್ 11ರಲ್ಲಿರುವ ಪ್ರಮುಖ ಮೆಟ್ರೋ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇಂದು ಗುರುವಾರ ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿತು.
ಬೆಂಕಿ ಕಾಣಿಸಿಕೊಂಡ ಕೂಡಲೇ ಎರಡನೇ ಮಹಡಿಯ ಕಿಟಕಿಗಳ ಗಾಜನ್ನು ಒಡೆದು ಅನೇಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತೆಂದು ತಿಳಿದು ಬಂದಿದೆ.
ಅದಾಗಿ ಆಸ್ಪತ್ರೆಯ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಹೊರತಂದು ಅಂಬುಲೆನ್ಸ್ ಮೂಲಕ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಬೆಂಕಿ ಅನಾಹುತದಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮೆಟ್ರೋ ಆಸ್ಪತ್ರೆ ಅಧ್ಯಕ್ಷ ಡಾ. ಪುರುಷೋತ್ತಮ ಲಾಲ್ ತಿಳಿಸಿದ್ದಾರೆ.
ಬೆಂಕಿ ಅವಘಡ ಸಂಭವಿಸಲು ಕಾರಣವೇನೆಂದು ನಿಖರವಾಗಿ ಗೊತ್ತಾಗಿಲ್ಲ; ಈ ಬಗ್ಗೆ ತನಿಖೆಗೆ ಆದೇಶಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್