‘ಉತ್ತರ’ ಪ್ರವಾಹ: ಸಾವಿನ ಸಂಖ್ಯೆ 55ಕ್ಕೇರಿಕೆ

Team Udayavani, Jul 18, 2019, 5:49 AM IST

ಪಂಜಾಬ್‌ನ ಬಟಿಂಡಾದಲ್ಲಿ ಮಳೆಯ ಮಧ್ಯೆಯೂ ರೋಗಿಗಳನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವೃದ್ಧ.

ನವದೆಹಲಿ: ಬಿಹಾರ, ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿ ಇನ್ನೂ ತಾರಕಕ್ಕೇರಿದ್ದು, ಬುಧವಾರದ ಹೊತ್ತಿಗೆ ಆ ಎರಡೂ ರಾಜ್ಯಗಳಲ್ಲಿ ಸಾವಿನ ಸಂಖ್ಯೆ 55ಕ್ಕೇರಿದೆ. ಉತ್ತರ ಪ್ರದೇಶದಲ್ಲಿ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ 14 ಜನ ಸಾವಿಗೀಡಾಗಿದ್ದಾರೆ.

ನೆರೆಯ ನೇಪಾಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಅದರ ಪರಿಣಾಮ ಬಿಹಾರದಲ್ಲಿನ ಪ್ರವಾಹ ಪರಿಸ್ಥಿತಿ ಏರಿಕೆಯಾಗುತ್ತಲೇ ಇದೆ. ಮಂಗಳವಾರ-ಬುಧವಾರ ಅಲ್ಲಿ 33 ಜನರು ಸಾವನ್ನಪ್ಪಿದ್ದಾರೆ. 25.7 ಲಕ್ಷ ಜನರು ಆಶ್ರಯ ಕಳೆದುಕೊಂಡಿದ್ದಾರೆ

ಅಸ್ಸಾಂನಲ್ಲಿ, 17 ಜನರು ಸಾವಿಗೀಡಾಗಿದ್ದು, 45 ಲಕ್ಷಕ್ಕಿಂತಲೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಬ್ರಹ್ಮಪುತ್ರಾ ಹಾಗೂ ಅದರ ಉಪನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮಿಜೋರಂನಲ್ಲಿ ಪ್ರವಾಹಕ್ಕೆ 5 ಮಂದಿ ಬಲಿಯಾಗಿದ್ದಾರೆ.

ಉ.ಪ್ರದೇಶದಲ್ಲಿ 14 ಸಾವು: ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ 14 ಜನರು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ. ಪಂಜಾಬ್‌, ಹರ್ಯಾಣ, ರಾಜಧಾನಿ ದೆಹಲಿಯಲ್ಲಿ ಉತ್ತಮ ಮಳೆಯಾಗಿದೆ.

ಸಾವಿನ ಸಂಖ್ಯೆ ಏರಿಕೆ: ಮುಂಬೈನ ಡೋಂಗ್ರಿಯಲ್ಲಿ ಮಂಗಳವಾರ ಸಂಭವಿಸಿದ್ದ 100 ವರ್ಷಗಳ ಹಳೆಯ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 14ಕ್ಕೇರಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಸ್ಥಗಿತಗೊಳಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ