ಮುಖ್ಯಮಂತ್ರಿ ಮಮತಾ ಸಂಪರ್ಕಕ್ಕೇ ಸಿಗುತ್ತಿಲ್ಲ: ಬಂಗಾಳ ರಾಜ್ಯಪಾಲ

Team Udayavani, Dec 7, 2019, 8:45 PM IST

ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಿ ಮಾತನಾಡುವ ಪ್ರಯತ್ನಗಳೆಲ್ಲ ವಿಫ‌ಲವಾಗಿವೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಹುದ್ದೆಯಲ್ಲಿರುವವರು ರಾಜ್ಯಪಾಲರ ಜತೆಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎಂದು ಬರೆದುಕೊಂಡಿದ್ದಾರೆ.

ಅವರು ಬಯಸುವ ಸ್ಥಳದಲ್ಲಿ ಮಾತುಕತೆ ನಡೆಸಲೂ ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿ ಅವರು ಧನಾತ್ಮಕವಾಗಿ ವ್ಯವಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದೂ ಧನ್‌ಕರ್‌ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇದೇ ವೇಳೆ “ಇಂಡಿಯಾ ಟುಡೇ ಈಸ್ಟ್‌ ಸಮಾವೇಶ’ದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ರಾಜ್ಯಪಾಲರು, ಅಕ್ಟೋಬರ್‌ನಲ್ಲಿ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ನಡೆದಿದ್ದ ಘಟನೆ ಮರಾಠಾ ದೊರೆ ಶಿವಾಜಿಗೆ ಮೊಘಲ್‌ ರಾಜ ಔರಂಗಜೇಬ್‌ ಅವಮಾನ ಮಾಡಿದಂತೆ ಇತ್ತು ಎಂದು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ