ಪ.ಬಂಗಾಳದಲ್ಲೂ ಎನ್ ಆರ್ ಸಿ ಬರಲಿ: ಬಬುಲ್ ಸುಪ್ರಿಯೋ

Team Udayavani, Sep 27, 2019, 8:00 AM IST

ಕೊಲ್ಕತ್ತಾ: ಅಕ್ರಮ ವಲಸಿಗರ ಪತ್ತೆ ಹಚ್ಚುವ ಸಲುವಾಗಿ ಪಶ್ಚಿಮ ಬಂಗಾಳದಲ್ಲೂ ರಾಷ್ಟ್ರೀಯ ನಾಗರಿಕರ ನೋಂದಣಿ ( ಎನ್ ಆರ್ ಸಿ) ಜಾರಿಗೆ ಬರಬೇಕೆಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.

ಮೂಲ ಭಾರತೀಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಅಕ್ರಮ ವಲಸಿಗರಿಗೆ ಕಡಿವಾಣ ಹಾಕಲು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಪಶ್ಚಿಮ ಬಂಗಾಳದಲ್ಲೂ ಅನುಷ್ಠಾನಕ್ಕೆ ತರಬೇಕು. ಮತ್ತು ಇದನ್ನು ಜಾರಿಗೊಳಿಸುವ ಧೈರ್ಯ ಮೋದಿ ಸರಕಾರಕ್ಕಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯ ಪಟ್ಟರು.

ಎನ್ ಆರ್ ಸಿ ಬಗ್ಗೆ ಜನರಿಗೆ ತಪ್ಪು ಮಾಹಿತಿಯನ್ನು ಹಬ್ಬುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಬುಲ್ ಸುಪ್ರಿಯೋ ತರಾಟೆಗೆ ತೆಗೆದುಕೊಂಡರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕಡೂರು: ತಾಲೂಕಿಗೆ ಕೃಷ್ಣಾ ಕೊಳ್ಳದಿಂದ ಮಂಜೂರಾಗಿರುವ 1.45 ಟಿಎಂಸಿ ನೀರಿನ ಸದುಪಯೋಗ ಸಂಪೂರ್ಣವಾಗಿ ತಾಲೂಕಿಗೆ ಲಭಿಸಲಿ ಎಂದು ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು. ಸುದ್ದಿಗೋಷ್ಠಿಯಲ್ಲಿ...

  • ಚಿತ್ರದುರ್ಗ: ಕಳೆದೊಂದು ವಾರದಿಂದ ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಕಡೆಗೂ ಸೆರೆ ಹಿಡಿಯಲಾಗಿದೆ. ದಸರಾ ಆನೆ ಅಭಿಮನ್ಯು ನೇತೃತ್ವದ...

  • ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಮಾವಿನ ತೋಟವೊಂದರಲ್ಲಿ ಶನಿವಾರ ರಾತ್ರಿ ನಡೆಯುತ್ತಿದ್ದ ಅಕ್ರಮ ರೇವ್‌ ಪಾರ್ಟಿಯ ಮೇಲೆ ಗ್ರಾಮಾಂತರ...

  • ತಿರುವನಂತಪುರಂ:  ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಕೇರಳದ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌, ತಿರುವನಂತಪುರಂಗೆ ಭಾರತ ತಂಡದೊಂದಿಗೆ...

  • ಹರಪನಹಳ್ಳಿ: ಮುಂದಿನ ದಿನಗಳಲ್ಲಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರು...