ಸಾಲ ಪಾವತಿಗೆ ಮಲ್ಯ ಭಾರೀ ಮೊತ್ತದ ಆಫರ್
Team Udayavani, Jul 18, 2020, 8:35 AM IST
ಹೊಸದಿಲ್ಲಿ: ಬ್ರಿಟನ್ನಿಂದ ಭಾರತಕ್ಕೆ ಗಡಿಪಾರಿನ ಅಂಚಿನಲ್ಲಿರುವ ಉದ್ಯಮಿ ವಿಜಯ ಮಲ್ಯ ಭಾರಿ ಮೊತ್ತದ ಸಾಲ ಮರು ಪಾವತಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯ ಪೀಠದ ಮುಂದೆ ವಕೀಲರ ಮೂಲಕ ಅಂಶ ಅರಿಕೆ ಮಾಡಿದ್ದಾರೆ. ಒಂದು ವೇಳೆ ಅದು ಸ್ವೀಕೃತಗೊಂಡರೆ ಜಾರಿ ನಿರ್ದೇಶ ನಾಲಯ ತಮ್ಮ ವಿರುದ್ಧ ದಾಖಲಿಸಿರುವ ಕೇಸುಗಳನ್ನು ಇತ್ಯರ್ಥ ಮಾಡಬೇಕೆಂದು ಕೋರಿಕೆ ಸಲ್ಲಿಸಿದ್ದಾರೆ.
ಗುರುವಾರ ನಡೆದ ವಿಚಾರಣೆ ವೇಳೆ ಮಲ್ಯ ಪರ ವಕೀಲರು ಮೊತ್ತದ ಅಂಶವನ್ನು ಪ್ರಸ್ತಾಪ ಮಾಡಿಲ್ಲ. ಆದರೆ ಸುಪ್ರೀಂಕೋರ್ಟ್ಗೆ ಜೂನ್ನಲ್ಲಿ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ 13,960 ಕೋಟಿ ರೂ. ಮೊತ್ತ ನೀಡುವುದಾಗಿ ಹೇಳಿದ್ದಾರೆ. ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟಕ್ಕೆ ಅವರು 9 ಸಾವಿರ ಕೋಟಿ ರೂ. ಪಾವತಿ ಮಾಡಬೇಕಾಗಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ಮಲ್ಯ ಭಾರತಕ್ಕೆ ಬರುವ ಮೊದಲು ಅವರು ನೀಡಲು ಉದ್ದೇಶಿಸಿರುವ ಮೊತ್ತವನ್ನು ಠೇವಣಿಯಾಗಿ ಇರಿಸಲಿ. ಅವರು ಆಗಾಗ ಇಂಥ ಕೊಡುಗೆಗಳನ್ನು ನೀಡುತ್ತಾ ಇರುತ್ತಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್