ಕರ್ನಾಟಕ ಚುನಾವಣೆ ಪ್ರಯುಕ್ತ ಪೆಟ್ರೋಲ್‌, ಡೀಸಿಲ್‌ ಬೆಲೆ ನಿಶ್ಚಲ ?


Team Udayavani, May 1, 2018, 3:13 PM IST

Petrol-pumps-700.jpg

ಹೊಸದಿಲ್ಲಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 2 ಡಾಲರ್‌ ಏರಿರುವ ಹೊರತಾಗಿಯೂ ಭಾರತೀಯ ತೈಲ ಮಾರಾಟ ಕಂಪೆನಿಗಳು ಪೆಟ್ರೋಲ್‌ ಮತ್ತು  ಡೀಸಿಲ್‌ ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿವೆ. ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ಮುನ್ನ  ಸೆಮಿಫೈನಲ್‌ ಎಂಬಂತೆ ಈಗಿನ್ನು ಎರಡು ವಾರಗಳ ಒಳಗೆ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗಳು ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

55 ತಿಂಗಳ ಗರಿಷ್ಠ ಮಟ್ಟವಾಗಿ ಪೆಟ್ರೋಲ್‌ ಲೀಟರ್‌ ದರ 74.63 ರೂ. ಮತ್ತು ಡೀಸಿಲ್‌ ಲೀಟರ್‌ ದರ 65.93 ರೂ.ಗಳಿಗೆ ಏರಿರುವ ಹೊರತಾಗಿಯೂ ಕೇಂದ್ರ ಹಣಕಾಸು ಸಚಿವಾಲಯ ಇಂಧನ ಮೇಲಿನ ಅಬಕಾರಿ ಸುಂಕ ಕಡಿತ ನಿರಾಕರಿಸಿದೆ. ಮಾತ್ರವಲ್ಲದೆ ಪೆಟ್ರೋಲ್‌ ಮತ್ತು ಡೀಸಿಲ್‌ ಲೀಟರ್‌ ದರದ 1ರೂ. ಏರಿಕೆಯನ್ನು ತತ್ಕಾಲದ ಮಟ್ಟಿಗೆ  ಅರಗಿಸಿಕೊಳ್ಳುವಂತೆ ಕೇಂದ್ರ ಸರಕಾರ ತೈಲ ಮಾರಾಟ ಕಂಪೆನಿಗಳನ್ನು ಕೇಳಿಕೊಂಡಿದೆ. ಹಾಗಾಗಿ ಕಳೆದ ಎ.24ರಿಂದ ತೈಲ ಮಾರಾಟ ಕಂಪೆನಿಗಳು ಇಂಧನ ದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತೈಲ ಮಾರಾಟ ಕಂಪೆನಿಗಳ ದೈನಂದಿನ ಇಂಧನ ದರ ಪರಿಷ್ಕರಣೆ ಪ್ರಕಟನೆಯು ಕಳೆದ ಎ.24ರಿಂದ ನಿಶ್ಚಲವಾಗಿರುವುದನ್ನು ತೋರಿಸುತ್ತದೆ. 

ಎಪ್ರಿಲ್‌ 24ಕ್ಕೆ ಮುನ್ನ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್‌ ಗೆ 78.84 ಡಾಲರ್‌ ಇದ್ದದ್ದು ಇದೀಗ 80.56 ಡಾಲರ್‌ಗೆ ಏರಿದೆ.  ಡಾಲರ್‌ ಎದುರು ರೂಪಾಯಿ ಈಗ 66.14 ರೂ. ಆಗಿದ್ದು ತೈಲ ಆಮದು ತುಟ್ಟಿಯಾಗಿದೆ. ಆದರೂ ದೇಶದಲ್ಲಿನ ಇಂಧನ ಬೆಲೆಯನ್ನು  ಕಡಿಮೆ ಮಾಡುವ ದಿಶೆಯಲ್ಲಿ  ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಬಕಾರಿ ಸುಂಕ ಇಳಿಕೆಗೆ ಸುತರಾಂ ಒಪ್ಪುತ್ತಿಲ್ಲ. 

ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಆ ಬಳಿಕ ಮತ್ತೆ ಇಂಧನ ಬೆಲೆಯ ದೈನಂದಿನ ಪರಿಷ್ಕರಣೆ ಆರಂಭವಾಗುವುದೆಂದು ಈಗ ತಿಳಿಯಲಾಗಿದೆ. 

ಟಾಪ್ ನ್ಯೂಸ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.