Ladakh ಪ್ರವಾಸದಲ್ಲಿ ರಾಹುಲ್ ಗಾಂಧಿ; ಸ್ಟೈಲಿಶ್ ಆಗಿ ಬೈಕ್ ಸವಾರಿ
ತಂದೆ ಹೇಳಿದ ಮಾತು ನೆನಪಿಸಿಕೊಂಡ ರಾಹುಲ್
Team Udayavani, Aug 19, 2023, 4:54 PM IST
ಹೊಸದಿಲ್ಲಿ: ಮೊದಲ ಬಾರಿ ಲಡಾಖ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ಯಾಂಗೊಂಗ್ ಸರೋವರಕ್ಕೆ ಸ್ಟೈಲಿಶ್ ಆಗಿ ಬೈಕ್ ನಲ್ಲಿ ಹೋಗುತ್ತಿರುವ ಫೋಟೋಗಳು ವೈರಲ್ ಆಗಿವೆ.
ರಾಹುಲ್ ಗಾಂಧಿ ಬೈಕ್ ಓಡಿಸುತ್ತಿರುವ ಚಿತ್ರಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ( ಟ್ವಿಟರ್) ಹ್ಯಾಂಡಲ್ ನಲ್ಲಿ ಹಂಚಿಕೊಂಡಿದೆ. ಕೆಲವು ಚಿತ್ರಗಳನ್ನು ರಾಹುಲ್ ಗಾಂಧಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.
ಪ್ಯಾಂಗಾಂಗ್ ಸರೋವರಕ್ಕೆ ಹೋಗುವ ದಾರಿಯಲ್ಲಿರುವ ಫೋಟೋ ಗಳನ್ನ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಇದು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದು ಎಂದು ನಮ್ಮ ತಂದೆ ಹೇಳುತ್ತಿದ್ದರು” ಎಂದು ಬರೆದಿದ್ದಾರೆ.
मोहब्बत का सफ़रनामा 🌸 pic.twitter.com/3RhepQQUch
— Congress (@INCIndia) August 19, 2023
ಶುಕ್ರವಾರ ರಾಹುಲ್ ಗಾಂಧಿ ಅವರು ಲಡಾಖ್ನಲ್ಲಿ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ಫುಟ್ಬಾಲ್ ಪಂದ್ಯವನ್ನೂ ಆಡಿದ್ದರು.
ವರದಿಗಳ ಪ್ರಕಾರ, ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿಯವರ ಜನ್ಮದಿನವಾದ ಆಗಸ್ಟ್ 20 ರಂದು ಪಾಂಗಾಂಗ್ ಸರೋವರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ