ಪೋಖ್ರಾನ್ ಪರೀಕ್ಷೆ: ಅಟಲ್ ಕೊಂಡಾಡಿದ ಮೋದಿ
Team Udayavani, May 12, 2017, 1:14 AM IST
ಹೊಸದಿಲ್ಲಿ: ಪೋಖ್ರಾನ್ ಪರಮಾಣು ಪರೀಕ್ಷೆ ನಡೆಸಿದ ಹಿಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೆಚ್ಚೆದೆಯ ನಿರ್ಧಾರವನ್ನು ಪ್ರಧಾನಿ ಮೋದಿ ಅವರು ಪ್ರಶಂಸಿಸಿದ್ದಾರೆ. ಕಳೆದ 1998ರಲ್ಲಿ ರಾಜಸ್ಥಾನದ ಪೋಖ್ರಾನ್ನಲ್ಲಿ ಪರಮಾಣು ಪರೀಕ್ಷೆ ನಡೆಸಿದ ಮೇಲೆ ಅದರ ನೆನೆಪಿಗಾಗಿ ಪ್ರತಿವರ್ಷ ಮೇ 11ರ ದಿನವನ್ನು ‘ರಾಷ್ಟ್ರೀಯ ತಂತ್ರಜ್ಞಾನ ದಿನ’ವನ್ನಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಪಿಎಂ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಮೂಲಕ ನಮ್ಮ ವಿಜ್ಞಾನಿಗಳು ಮತ್ತು ರಾಜಕೀಯ ನಾಯಕರು ತೋರಿದ ಎದೆಗಾರಿಕೆಗೆ ನಾವೆಲ್ಲ ಚಿರಋಣಿಯಾಗಿರಬೇಕು. 5 ಪರಮಾಣು ಪರೀಕ್ಷೆಗಳನ್ನು ಬಹಳ ಯಶಸ್ವಿಯಾಗಿ ಮಾಡುವ ಮೂಲಕ ವಿಶ್ವಕ್ಕೆ ಭಾರತದ ಶಕ್ತಿಯೇನು ಎಂಬುದನ್ನು ತೋರಿಸಿಕೊಡಲಾಯಿತು ಎಂದು ಎರಡು ದಶಕಗಳ ಹಿಂದಿನ ಘಟನೆಯನ್ನು ನೆನಪು ಮಾಡಿಕೊಂಡು ಅಟಲ್ ಅವರ ನಿರ್ಧಾರವನ್ನು ಮನಸಾರೆ ಹೊಗಳಿದರು. ವಿಶ್ವ ಸಮುದಾಯ ಭಾರತದ ಮೇಲೆ ದಿಗ್ಬಂಧನ ವಿಧಿಸಲಿದೆ ಎಂಬ ಅರಿವಿದ್ದರೂ ಅದಕ್ಕೆ ಹೆದರದೆ ವಿಭಿನ್ನ ಸಂದೇಶ ರವಾನೆ ಮಾಡಿದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ