ಮಾಲ್ಡೀವ್ಸ್‌ಗೆ ಭಾರತ ಸೇನೆ?

Team Udayavani, Feb 7, 2018, 4:09 PM IST

indian-army.jpg

ನವದೆಹಲಿ/ಮಾಲೆ: ಮಾಲ್ಡೀವ್ಸ್‌ನಲ್ಲಿ ಸರ್ಕಾರ ಮತ್ತು ಸುಪ್ರೀಂಕೋರ್ಟ್‌ ನಡುವೆ ಬಿಕ್ಕಟ್ಟು ಉಂಟಾಗಿ ತುರ್ತುಪರಿಸ್ಥಿತಿ ಘೋಷಣೆಯಾಗಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಹರಿಸುತ್ತಿದ್ದು,ಅಗತ್ಯ ಬಿದ್ದರೆ ಸೇನೆಯನ್ನು ರವಾನಿಸುವ ಆಯ್ಕೆಯನ್ನೂ ಮುಕ್ತವಾಗಿ ಇರಿಸಿಕೊಂಡಿದೆ.

ದ್ವೀಪ ರಾಷ್ಟ್ರದ ಬೆಳವಣಿಗೆ ಕಳವಳಕಾರಿಯಾಗಿದೆ. ಇದರಿಂದ ಭಾರತದ ಇಲಾಖೆ ವ್ಯಾಕುಲಗೊಂಡಿದೆ ಎಂದು ವಿದೇಶಾಂಗ ಇಲಾಖೆ ನವದೆಹಲಿಯಲ್ಲಿ ಹೇಳಿದೆ. ಭಾರತೀಯರು ಅಗತ್ಯ ಬಿದ್ದರೆ ಮಾತ್ರ ಮಾಲ್ಡೀವ್ಸ್‌ಗೆ ಪ್ರಯಾಣಿಸಬೇಕು ಎಂದು ಈಗಾಗಲೇ ಎಚ್ಚರಿಕೆ ಸೂಚನೆ ನೀಡಿರುವ ಕೇಂದ್ರ, ದಕ್ಷಿಣ ಭಾರತದ ಪ್ರಮುಖ ವಾಯುನೆಲೆಯೊಂದರಿಂದ ಮಾಲ್ಡೀವ್ಸ್‌ ರಾಜಧಾನಿ
ಮಾಲೆಗೆ ಸೇನೆ ರವಾನಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ಮೂಲಗಳು ಹೇಳಿವೆ. ಮೂಲಗಳ
ಪ್ರಕಾರ ಆ ವಾಯುನೆಲೆಯಲ್ಲಿ ಸೇನೆಗಳ ಸಂಚಾರ ಬಿರುಸಿನಿಂದ ನಡೆಯುತ್ತಿದೆ. ಪರಿಸ್ಥಿತಿಯನ್ನು ಗಮನಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ. ಮತ್ತೂಂದೆಡೆ ಭಾರತ ಮತ್ತು ಮಾಲ್ಡೀವ್ಸ್‌ ಅಂತಾರಾಷ್ಟ್ರೀಯ ಜಲಗಡಿ ಪ್ರದೇಶದಲ್ಲಿ ಗಸ್ತು ಬಿಗಿಗೊಳಿಸಲಾಗಿದೆ.

ಭಾರತ ಮಧ್ಯಪ್ರವೇಶಿಸಲಿ: ಇದೇ ವೇಳೆ ಶ್ರೀಲಂಕಾ ರಾಜಧಾನಿ ಕೊಲೊಂಬೋದಲ್ಲಿರುವ ಮಾಲ್ಡೀವ್ಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಶೀದ್‌ ಮಾತನಾಡಿ ಭಾರತ ಸರ್ಕಾರ ಕೂಡಲೇ ವಿಶೇಷ ಪ್ರತಿನಿಧಿಯೊಬ್ಬರನ್ನು ಕಳುಹಿಸಬೇಕು. ಜತೆಗೆ ಸೇನೆಯನ್ನು ಕಳುಹಿಸಿ ಪರಿಸ್ಥಿತಿ ನಿಯಂತ್ರಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಮೆರಿಕ ಸರ್ಕಾರವೂ ಬಿಕ್ಕಟ್ಟು ನಿವಾರಣೆಗೆ ನೆರವಾಗ ಬೇಕು ಎಂದು ಪ್ರತಿಪಾದಿಸಿದ್ದಾರೆ. ಅಧ್ಯಕ್ಷ ಅಬ್ದುಲ್ಲಾ ಯಮೀನ್‌ ಅಕ್ರಮವಾಗಿ ತುರ್ತು ಪರಿಸ್ಥಿತಿ ಹೇರಿದ್ದಾರೆ. ಇದು ಸಂವಿಧಾನಬಾಹಿರ ಎಂದು ಅವರು ಹೇಳಿದ್ದಾರೆ. ಅಧ್ಯಕ್ಷ ಯಮೀನ್‌ರನ್ನು ಕೂಡಲೇ ಅಧಿಕಾರದಿಂದ ಕೆಳಗಿಳಿಸಬೇಕು. ದೇಶದಲ್ಲಿನ ಬೆಳವಣಿಗೆ ಮಾಲ್ಡೀವ್ಸ್‌ ಮತ್ತು ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿನ ಭದ್ರತೆಗೆ ಧಕ್ಕೆ ಎಂದು ನಶೀದ್‌ ಹೇಳಿದ್ದಾರೆ. 2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮೊಹಮ್ಮದ್‌ ನಶೀದ್‌ ಹಾಲಿ ಅಧ್ಯಕ್ಷ ಅಬ್ದುಲ್ಲಾ ಯಮೀನ್‌ ವಿರುದ್ಧ ಕಡಿಮೆ ಅಂತರದಲ್ಲಿ ಸೋತಿದ್ದರು.

ಆದೇಶ ರದ್ದು: ಮಂಗಳವಾರ ತಡ ರಾತ್ರಿ ಒಂಭತ್ತು ಮಂದಿ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ. ಭಾರತ ಸೇನೆಯನ್ನು ಕಳುಹಿಸಬೇಕು ಎಂದು ಮಾಜಿ ಅಧ್ಯಕ್ಷ ನಶೀದ್‌ ಮನವಿ
ಮಾಡಿದ ಬೆನ್ನಲ್ಲೇ ಹೀಗಾಗಿದೆ. ಸುಪ್ರೀಂಕೋರ್ಟ್‌ ಇತರ ನ್ಯಾಯಮೂರ್ತಿಗಳು ಬದಲಿ ತೀರ್ಪು ನೀಡಿದ್ದಾರೆ.

ಕಳೆದ ರಾತ್ರಿ ಏನಾಗಿತ್ತು?: ಕಳೆದ ರಾತ್ರಿ ಮಾಜಿ ಅಧ್ಯಕ್ಷ ಮವೂಮ್‌ ಅಬ್ದುಲ್‌ ಗಯೂಮ್‌ ಮತ್ತು ಅವರ ಪುತ್ರಿ,ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ಮತ್ತೂಬ್ಬ ನ್ಯಾಯಮೂರ್ತಿಗಳನ್ನು ಬಂಧಿಸಲಾಗಿತ್ತು. ಮಾಜಿ ಅಧ್ಯಕ್ಷ ಗಯೂಮ್‌ ಹಾಲಿ ಅಧ್ಯಕ್ಷ ಯಮೀನ್‌ ಅವರ ಮಲ ಸಹೋದರನಾಗಿದ್ದಾರೆ. ಸೇನೆ ಸುಪ್ರೀಂಕೋರ್ಟ್‌ ಒಳಪ್ರವೇಶಿಸಿವೆ. 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.