ಮತ್ತೂಂದು ಸುತ್ತಿನ ಬಲ ಪ್ರದರ್ಶನ
Team Udayavani, Dec 17, 2018, 7:00 AM IST
ಚೆನ್ನೈ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಮಹಾಮೈತ್ರಿ ರಚನೆಗೆ ಮುಂದಾಗಿರುವ ಪ್ರತಿಪಕ್ಷಗಳು ಭಾನುವಾರ ತಮಿಳುನಾಡಿನಲ್ಲಿ ಮತ್ತೂಂದು ಸುತ್ತಿನ ಒಗ್ಗಟ್ಟು ಪ್ರದರ್ಶಿಸಿವೆ.
ಚೆನ್ನೈನಲ್ಲಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಭಾನುವಾರ ನಡೆದಿದ್ದು, ವಿಪಕ್ಷಗಳು ಅನೇಕ ನಾಯಕರು ಇದರಲ್ಲಿ ಭಾಗವಹಿಸುವ ಮೂಲಕ ಬಲಪ್ರದರ್ಶನ ಮಾಡಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್, ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಉಪ ಸ್ಥಿತ ರಿದ್ದರು. ನಟ ಹಾಗೂ ರಾಜಕಾರಣಿ ರಜನಿಕಾಂತ್ ಅವರೂ ಇದರಲ್ಲಿ ಪಾಲ್ಗೊಂಡಿದ್ದದ್ದು ವಿಶೇಷವಾಗಿತ್ತು.
ಸೋಮವಾರ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿಎಂಗಳ ಪ್ರಮಾಣ ಸ್ವೀಕಾರ ಸಮಾರಂಭದಲ್ಲೂ ಇದೇ ಒಗ್ಗಟ್ಟು ಪುನರಾವರ್ತಿಸಲಿದೆ. ಈ ಹಿಂದೆ ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರ ಪ್ರಮಾಣ ಸ್ವೀಕಾರ ಕಾರ್ಯಕ್ರಮಕ್ಕೂ ವಿಪಕ್ಷಗಳ ನಾಯಕರು ಆಗಮಿಸುವ ಮೂಲಕ ಮಹಾಮೈತ್ರಿಗೆ ಮುನ್ನುಡಿ ಬರೆಯುವ ಸುಳಿವು ನೀಡಿದ್ದರು.
ಭಾನುವಾರ ಕರುಣಾ ಅವರ ಪ್ರತಿಮೆಯನ್ನು ಸೋನಿಯಾ ಗಾಂಧಿ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್, “ರಾಹುಲ್ ಗಾಂಧಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಬೇಕು’ ಎಂದು ಆಗ್ರಹಿಸಿದರು. ಕಾರ್ಯ ಕ್ರಮದಲ್ಲಿ ಮಾತನಾಡಿದ ರಾಹುಲ್, “ಕೇಂದ್ರ ಸರ್ಕಾರವು ಜನರ ಧ್ವನಿ, ಸಂಸ್ಕೃತಿ, ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ. ಕರುಣಾನಿಧಿ ಅವರ ಸ್ಮರಣೆಯಲ್ಲಿ ಭಾರತದ ಎಲ್ಲ ಧ್ವನಿಗಳೂ ಒಗ್ಗಟ್ಟಾಗಿ, ಬಿಜೆಪಿಯನ್ನು ಸೋಲಿಸಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ