ಕಾಂಗ್ರೆಸ್‌ನಿಂದ ಗುಲಾಬಿ ಬಣ್ಣಕ್ಕೆ ಆಕ್ಷೇಪ


Team Udayavani, Nov 14, 2018, 9:55 AM IST

evm.png

ಹೈದರಾಬಾದ್‌: ತೆಲಂಗಾಣದಲ್ಲಿ ಡಿ.7ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂಗಳ ಮೇಲೆ ಗುಲಾಬಿ ಬಣ್ಣದ ಸ್ಲಿಪ್‌ಗ್ಳನ್ನು ಬಳಕೆ ಮಾಡುವುದು ಬೇಡ. ಅದು ಆಡಳಿತಾ ರೂಢ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಬಣ್ಣ ಎಂದು ಕಾಂಗ್ರೆಸ್‌ ತಕರಾರು ತೆಗೆದಿದೆ. 90 ಲಕ್ಷ ಇವಿಎಂಗಳಿಗಾಗಿ 90 ಲಕ್ಷ ಮತಪತ್ರಗಳನ್ನು ಮುದ್ರಿಸಲು ಚುನಾವಣಾ ಆಯೋಗ ಆದೇಶ ನೀಡಿತ್ತು. ಆ ಕೆಲಸ ಈಗ ಪೂರ್ತಿಯಾಗಿ, ಇವಿಎಂಗಳ ಮೇಲೆ ಅಂಟಿಸಲಾಗಿದೆ. 

ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಈ ಕ್ರಮ ಅಡ್ಡಿಯಾಗಿದೆ. ಇದರಿಂದಾಗಿ ಟಿಆರ್‌ಎಸ್‌ಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ನಾಯಕ ದಾಸೋಜು ಶ್ರವಣ ವಾದಿಸಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಮತದಾರನೂ ಟಿಆರ್‌ಎಸ್‌ ಅಭ್ಯರ್ಥಿಗೇ ಮತ ಹಾಕಬೇಕು ಎಂಬ ಭಾವನೆ ಹೊಂದಲಿದ್ದಾನೆ ಎಂದು ಪ್ರತಿಪಾದಿಸಿದ್ದಾರೆ. ಮಹಿಳೆಯರಿಗಾಗಿ ಗುಲಾಬಿ ಬಣ್ಣದ ಬೂತ್‌ಗಳ ನಿರ್ಮಾಣಕ್ಕೆ ಮುಂದಾಯಿತು. ಅದಕ್ಕೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದಾಗ ಪ್ರಸ್ತಾಪ ಹಿಂಪಡೆಯಿತು ಎಂದು ಹೇಳಿದ್ದಾರೆ.

ಇದೇ ವೇಳೆ ತೆಲಂಗಾಣ ಚುನಾವಣೆಗಾಗಿ ಕಾಂಗ್ರೆಸ್‌ 65 ಮಂದಿ  ಇರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎನ್‌.ಉತ್ತಮ ಕುಮಾರ್‌ ರೆಡ್ಡಿ ಹುಝೂರ್‌ನಗರದಿಂದ, ಅವರ ಪತ್ನಿ ಪದ್ಮಾವತಿ ರೆಡ್ಡಿ ಕೊಡಾಡ್‌ನಿಂದ, ಕೆ.ಜನಾ ರೆಡ್ಡಿ ನಾಗಾರ್ಜುನ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಬಾರದು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚಿಸಿದ್ದರೂ, ಅದನ್ನು ಪಾಲಿಸಲಾಗಿಲ್ಲ. 

ಇದೇ ವೇಳೆ ಛತ್ತೀಸ್‌ಗಢದ ಮಹಾ ಸಮುಂದ್‌, ಬಲೋಡಾಬಜಾರ್‌ಗಳಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಕಪ್ಪು ಹಣ ಹೊಂದಿರುವ ಕಳ್ಳರಿಗೆ ಅದನ್ನು ಸಕ್ರಮಗೊಳಿ ಸುವಲ್ಲಿ ನೆರವಾಗಿದ್ದಾರೆ ಎಂದು ದೂರಿದ್ದಾರೆ. ರಫೇಲ್‌ ಯುದ್ಧ ವಿಮಾನ ಡೀಲ್‌ ಅನ್ನು ರಿಲಯನ್ಸ್‌ ಡಿಫೆನ್ಸ್‌ಗೆ ನೀಡುವ ಮೂಲಕ ಅನಿಲ್‌ ಅಂಬಾನಿಗೆ ನೆರವಾಗಿದ್ದಾರೆ ಎಂದರು. ಜನಸಮಾನ್ಯರ ಬಳಿ ಇದ್ದ 500 ರೂ., 1 ಸಾವಿರ ರೂ. ನೋಟುಗಳನ್ನು ಕಿತುಕೊಂಡು ನೀರವ್‌ ಮೋದಿ, ವಿಜಯ ಮಲ್ಯರಿಗೆ ನೀಡಲಾಗಿದೆ ಎಂದು ರಾಹುಲ್‌ ಲೇವಡಿ ಮಾಡಿದರು.

ಟಾಪ್ ನ್ಯೂಸ್

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.