ಕೋವಿಡ್ ಲಸಿಕೆ: 175 ಕೋಟಿ ಡೋಸ್ ಪೂರ್ಣ
Team Udayavani, Feb 19, 2022, 10:38 PM IST
ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನವು ಶನಿವಾರ 175 ಕೋಟಿ ಡೋಸ್ ಪೂರ್ಣಗೊಳಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶನಿವಾರ ಬೆಳಗ್ಗೆಯವರೆಗೆ 175.03 ಕೋಟಿ ಡೋಸ್ ಲಸಿಕೆ ಕೊಡಲಾಗಿದೆ. ಅದರಲ್ಲಿ 40 ಲಕ್ಷಕ್ಕೂ ಅಧಿಕ ಡೋಸ್ ಮುನ್ನೆಚ್ಚರಿಕಾ ಡೋಸ್ ಕೂಡ ಸೇರಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಾಗೆಯೇ ದೇಶದಲ್ಲಿ ಕೊರೊನಾ ಸೋಂಕು ಕೂಡ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೆ 22,270 ಪ್ರಕರಣಗಳು ದೃಢವಾಗಿವೆ ಎಂದು ಮಾಹಿತಿ ಕೊಟ್ಟಿದ್ದಾರೆ.
ವಿವೇಕ್ ಮೂರ್ತಿಗೆ ಸೋಂಕು
ಅಮೆರಿಕದ ಸರ್ಜನ್ ಜನರಲ್ ಆಗಿರುವ ಡಾ.ವಿವೇಕ್ ಮೂರ್ತಿ ಅವರ ಪೂರ್ತಿ ಕುಟುಂಬಕ್ಕೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.
ಪತ್ನಿ , 4 ವರ್ಷದ ಮಗಳು ಮತ್ತು 5 ವರ್ಷದ ಮಗನ ಜತೆ ನನಗೂ ಸೋಂಕು ದೃಢವಾಗಿದೆ.
ಸೋಂಕಿನಿಂದ ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಎಲ್ಲರೂ ಕೊರೊನಾ ಲಸಿಕೆ ಪಡೆಯಿರಿ ಎಂದು ಅವರು ಅಮೆರಿಕದ ಜನತೆಗೆ ಮನವಿ ಮಾಡಿದ್ದಾರೆ.