ಕೊನೆಗೂ 105 ದಿನಗಳ ಜೈಲುವಾಸ ಅಂತ್ಯ; ಸುಪ್ರೀಂನಿಂದ ಚಿದಂಬರಂಗೆ ಜಾಮೀನು

Team Udayavani, Dec 4, 2019, 11:00 AM IST

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 105 ದಿನಗಳಿಂದ ಜೈಲು ಶಿಕ್ಷೆ ಅನುಭವಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾ.ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠ ಚಿದಂಬರಂಗೆ ಷರತ್ತು ಬದ್ಧ ಜಾಮೀನು ನೀಡಿದೆ. ಸಾರ್ವಜನಿಕ ಹೇಳಿಕೆ, ಸಂದರ್ಶನ ನೀಡದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಪಾಸ್ ಪೋರ್ಟ್ ಪೊಲೀಸರ ವಶಕ್ಕೆ ಒಪ್ಪಿಸಬೇಕು, ಇಬ್ಬರ ಶ್ಯೂರಿಟಿ ಹಾಗೂ 2 ಲಕ್ಷ ರೂಪಾಯಿ ಠೇವಣಿ ಭದ್ರತೆ ನೀಡುವಂತೆ ಸುಪ್ರೀಂಕೋರ್ಟ್ ತಿಳಿಸಿದೆ. ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸುವುದು, ಪ್ರಭಾವ ಬೀರಬಾರದು ಎಂದು ನಿರ್ದೇಶನ ನೀಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ