ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಐಎಸ್‌ಐ ರಣತಂತ್ರದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

Team Udayavani, Oct 20, 2021, 7:20 AM IST

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸುತ್ತಿರುವ ಪಾಕಿಸ್ಥಾನ‌, ಅದಕ್ಕಾಗಿ ತಾನು ಈವರೆಗೆ ಪಾಲಿಸುತ್ತಿದ್ದ ಎಲ್ಲ ರೀತಿಯ ತಂತ್ರಗಳನ್ನು ಬದಲಾಯಿಸಿದೆ ಎಂದು ಭಾರತೀಯ ಗುಪ್ತಚರ ಇಲಾಖೆ, ಕೇಂದ್ರ ಸರಕಾರಕ್ಕೆ ಮಾಹಿತಿ ಸಲ್ಲಿಸಿದೆ.

ಹೀಗೆ ತಂತ್ರಗಾರಿಕೆ ಬದಲಾಯಿಸು ವುದರ ಹಿಂದೆ ಪಾಕಿಸ್ಥಾನ‌ಕ್ಕೆ ಎರಡು ಉದ್ದೇಶ ಗಳಿವೆ. ಕಣಿವೆಯಲ್ಲಿ ಇತ್ತೀ ಚಿಗೆ ಇಳಿಕೆಯಾ ಗಿದ್ದ ಭಯೋತ್ಪಾದನೆ ಇನ್ನೂ ಜೀವಂತ ವಾಗಿದೆ ಎಂಬುದರ ಬಗ್ಗೆ ಕಾಶ್ಮೀರಿ ಯುವಕರಿಗೆ ಸ್ಪಷ್ಟ ಸಂದೇಶ ರವಾನಿಸುವುದು ಹಾಗೂ ಅವ ರನ್ನು ಅದರತ್ತ ಆಕರ್ಷಿಸುವುದು ಎಂದು ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೊಂದು ಉದ್ದೇಶವೆಂದರೆ – ಕಾಶ್ಮೀರದಲ್ಲಿ ಶಾಶ್ವತವಾಗಿ ನೆಲೆಸಲು ಬರುವ ಇತರ ರಾಜ್ಯಗಳ ವ್ಯಕ್ತಿಗಳನ್ನು ಕೊಲ್ಲುವ ಮೂಲಕ ಅನ್ಯ ರಾಜ್ಯಗಳ ನಾಗರಿಕರಲ್ಲಿ ಭಯ ಬಿತ್ತುವುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾಗಿ, ಆ ರಾಜ್ಯ ಇತರ ರಾಜ್ಯಗಳಂತೆ ದೇಶದ ಎಲ್ಲ ಜನರ ವಾಸಸ್ಥಳವಾಗಿ ಮುಕ್ತವಾಗಿ ತೆರೆಯಲ್ಪಟ್ಟಿದೆ. ಇದನ್ನು ಸಹಿಸದ ಪಾಕಿಸ್ಥಾನ‌, ಅನ್ಯ ರಾಜ್ಯಗಳಿಂದ ಕಣಿವೆಯಲ್ಲಿ ಬಂದು ನೆಲೆ ಯೂರುವವರಲ್ಲಿ ಭೀತಿ ಹುಟ್ಟಿಸಲು ನಿರ್ಧರಿಸಿದೆ.

ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಹಾಗಾಗಿಯೇ, ಅಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಗಳ ವೇಳೆ, ಅನ್ಯ ರಾಜ್ಯಗಳಿಂದ ಬಂದಿರುವ ಕೂಲಿಕಾರ್ಮಿ ಕರು, ಬೀದಿ ವ್ಯಾಪಾರಿಗಳನ್ನು ಕೊಲ್ಲಲಾಗಿದೆ. ಅ. 2ರಂದು ಶ್ರೀನಗರದ ಮುಖ್ಯ ಮಾರುಕಟ್ಟೆಯಲ್ಲಿ ಔಷಧ ಅಂಗಡಿ ಮಾಲಕ ಎಂ.ಎಲ್‌. ಬಿಂದ್ರೂ ಹಾಗೂ ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಕೊಂದಿದ್ದು, ರಾಷ್ಟ್ರಾದ್ಯಂತ ಇರುವ ಎಲ್ಲ ಮಾಧ್ಯಮಗಳಲ್ಲಿ ಪ್ರಕಟ ವಾಗಿತ್ತು. ಇದು ಸಹಜವಾಗಿಯೇ ದೇಶದ ಇತರ ಭಾಗಗಳಲ್ಲಿ ಭಯ ಬಿತ್ತಿದೆ. ಇದೇ ರೀತಿಯ ಭೀತಿ ಹೆಚ್ಚಾಗಬೇಕು ಎಂಬುದು ಪಾಕಿಸ್ಥಾನ‌ದ ಉದ್ದೇಶ. ಇದು ಸಾಲದೆಂಬಂತೆ ಮತ್ತಷ್ಟು ದಾಳಿಗಳನ್ನು ನಡೆಸಿರುವ ಅವರು ಇತ್ತೀಚೆಗೆ ಬಿಹಾರದಿಂದ ಬಂದಿದ್ದ ಕೂಲಿ ಕಾರ್ಮಿಕರನ್ನು ಕೊಂದಿದ್ದಾರೆ. ಇವೆೆಲ್ಲವೂ ಅನ್ಯ ರಾಜ್ಯಗಳ ಜನರು ಶಾಶ್ವತವಾಗಿ ನೆಲೆ ಯೂರಲು ಕಾಶ್ಮೀರಕ್ಕೆ ಬರದಂತೆ ತಡೆಯಲು ಮಾಡುತ್ತಿರುವ ಪ್ರಯತ್ನಗಳು’ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ ಇತ್ತೀಚೆಗೆ ಕಣಿವೆಯಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಗಳಲ್ಲಿ ಹುತಾತ್ಮ ರಾದ ಭಾರತೀಯ ಯೋಧರ ಸಾವಿನ ಹಿಂದೆ ಪಾಕಿಸ್ಥಾನ‌ದಿಂದ ಗಡಿ ನಿಯಂತ್ರಣ ರೇಖೆಯ ಮೂಲಕ ಭಾರತದೊಳಕ್ಕೆ ನುಸುಳಿದ ಉಗ್ರರೇ ಕಾರಣ ಎಂಬುದಕ್ಕೆ ಅನೇಕ ಸಾಕ್ಷಿಗಳಿವೆ ಎಂದು ತಿಳಿಸಿದ್ದಾರೆ.

ಯುವಕರೇ ಅಪಾಯವಾಗುವ ಸಾಧ್ಯತೆ
ಇದೇ ವೇಳೆ, ಜಮ್ಮು ಕಾಶ್ಮೀರದ ಸ್ಥಳೀಯ ಯುವಕರನ್ನು ಕಾಶ್ಮೀರ ಭಯೋತ್ಪಾದನೆಯತ್ತ ಆಕರ್ಷಿಸಲು ಪಾಕಿಸ್ಥಾನ‌ ಇನ್ನಿಲ್ಲದ ಹೊಸ ಪ್ರಯತ್ನಗಳನ್ನು ಮಾಡುತ್ತದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಈಗಾಗಲೇ ಪಾಕಿಸ್ಥಾನ‌ದಲ್ಲಿ ಹೊಸ ಯುವಕರ ಸಂಘಟನೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಪಾಕಿಸ್ಥಾನ‌, ಮುಂದೆ ಅವರನ್ನು ಭಾರತದ ಶಕ್ತಿಶಾಲಿ ಉಗ್ರರನ್ನಾಗಿಸಲು ಯೋಜಿಸಿದೆ. ಹೀಗಾದರೆ ಮುಂದೆ ಈ ಯುವಕರೇ ಭಾರತದ ಪಾಲಿಗೆ ಅಪಾಯಕಾರಿಯಾಗಲಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.