ಪಾಕಿಸ್ಥಾನದಲ್ಲಿ ಪದ್ಮಾವತ್ ಚಿತ್ರ ಬಿಡುಗಡೆ ಹಾದಿ ಸುಗಮ
Team Udayavani, Jan 25, 2018, 3:10 PM IST
ಹೊಸದಿಲ್ಲಿ : ಭಾರತದಲ್ಲಿ ಇಂದು ತೆರೆ ಕಂಡಿರುವ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಿತ “ಪದ್ಮಾವತ್’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಪಾಕಿಸ್ಥಾನದಲ್ಲಿ ಪದ್ಮಾವತ್ ಚಿತ್ರ ಬಿಡುಗಡೆಯ ಹಾದಿ ಸುಗಮವಾಗಿದ್ದು ಅಲ್ಲಿನ ಸೆನ್ಸಾರ್ ಮಂಡಳಿ ಅನುಮತಿ ನೀಡಿದೆ.
“ಪದ್ಮಾವತ್’ ಚಿತ್ರ ಸಾರ್ವಜನಿಕ ಪ್ರದರ್ಶನಕ್ಕೆ ಯೋಗ್ಯವೆಂದು ಪರಿಗಣಿಸಲಾಗಿದ್ದು ಸೆನ್ಸಾರ್ ಮಂಡಳಿ ಯಾವುದೇ ಕಟ್ ಸೂಚಿಸಿಲ್ಲ ಎಂದು ಇಸ್ಲಾಮಾಬಾದ್ ನಿಂದ ಸಾಮಾಜಿಕ ಮಾಧ್ಯಮದ ಮೂಲಕ ಮೊಬಾಶೀರ್ ಹುಸೇನ್ ಅವರು ಐಎಎನ್ಎಸ್ಗೆ ತಿಳಿಸಿದ್ದಾರೆ.
ಪಾಕಿಸ್ಥಾನದಲ್ಲಿ ಪದ್ಮಾವತ್ ಚಿತ್ರಕ್ಕೆ ಯು ಸರ್ಟಿಫಿಕೇಟ್ ನೀಡಲಾಗಿದೆ. ಅಲ್ಲಿನ ಚಿತ್ರ ವಿತರಕರ ಪ್ರಕಾರ ಅಲ್ಲಾವುದ್ದೀನ್ ಖೀಲ್ಜಿಯನ್ನು ಚಿತ್ರದಲ್ಲಿ ನೇತ್ಯಾತ್ಮಕವಾಗಿ ಬಿಂಬಿಸಲಾಗಿರಬಹುದೆಂಬ ಭಯ ಇತ್ತು; ಆದರೆ ಪಾಕ್ ಸೆನ್ಸಾರ್ ಮಂಡಳಿ ಕಲೆ, ಸೃಜನಾತ್ಮಕತೆ ಮತ್ತು ಆರೋಗ್ಯಕರ ಮನೋರಂಜನೆಯ ಬಗ್ಗೆ ಯಾವುದೇ ಪೂರ್ವಾಗ್ರಹ ಹೊಂದಿಲ್ಲ ಎಂದು ಮೊಬಾಶಿರ್ ಹುಸೇನ್ ಹೇಳಿರುವುದನ್ನು ವರದಿ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್