ಕಣಿವೆಯಲ್ಲಿ ಅಶಾಂತಿ ಸೃಷ್ಟಿಸಲು ಪ್ರತ್ಯೇಕತಾವಾದಿಗಳಿಗೆ ಪಾಕ್ ಹೈಕಮೀಷನ್ ಬೆಂಬಲ: NIA
Team Udayavani, Oct 5, 2019, 3:30 PM IST
ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಅಶಾಂತಿ ಸೃಷ್ಟಿಸಲು ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನದ ರಾಯಭಾರಿ ಕಚೇರಿ ಬೆಂಬಲ ನೀಡುವ ಮೂಲಕ ಪ್ರಮುಖ ಪಾತ್ರವಹಿಸಿದೆ ಎಂದು ಎನ್ ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಆರೋಪಿಸಿದೆ.
ಜಮ್ಮು-ಕಾಶ್ಮೀರ ಟೆರರ್ ಫಂಡಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್ ಎಫ್)ನ ಮುಖ್ಯಸ್ಥ ಯಾಸಿನ್ ಮಲಿಕ್ ಹಾಗೂ ಇತರ ನಾಲ್ವರ ವಿರುದ್ಧ ದೆಹಲಿ ಹೈಕೋರ್ಟ್ ಗೆ ಎನ್ ಐಎ ಸಲ್ಲಿಸಿರುವ 3000 ಪುಟಗಳ ಹೆಚ್ಚುವರಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ ಎಂದು ವರದಿ ತಿಳಿಸಿದೆ.
ಹಣ ವರ್ಗಾವಣೆ ಮೂಲಕ ಪಾಕಿಸ್ತಾನದ ಹೈಕಮೀಷನ್ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡಿದ್ದು, ಕಣಿವೆಯಲ್ಲಿ ಅಶಾಂತಿ ಸೃಷ್ಟಿಸಲು ನಿರ್ದೇಶನ ನೀಡಿರುವುದು ಸ್ಪಷ್ಟವಾಗಿ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಎನ್ ಐಎ ಪ್ರಕಟಣೆಯಲ್ಲಿ ವಿವರಿಸಿದೆ.
ಯಾಸಿನ್ ಮಲಿಕ್ ಸೇರಿದಂತೆ ಐವರು ಆರೋಪಿಗಳು ಕ್ರಿಮಿನಲ್ ಸಂಚು ರೂಪಿಸಿರುವುದಾಗಿ ಎನ್ ಐಎ ದೂರಿದೆ. ಹುರಿಯತ್ ಮುಖಂಡರು, ಉಗ್ರರು ಹಾಗೂ ಕಲ್ಲು ತೂರಾಟಗಾರರು ಹಿಂಸಾಚಾರ, ಅಶಾಂತಿ ವಾತಾವರಣ ನಿರ್ಮಾಣದಂತಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದಾಗಿ ಎನ್ ಐಎ ಪ್ರತಿಪಾದಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ