Hyderabad; ಪತ್ನಿ ಭೇಟಿಗಾಗಿ ಭಾರತಕ್ಕೆ ಪ್ರವೇಶಿಸಿದ ಪಾಕ್ ವ್ಯಕ್ತಿಯ ಬಂಧನ
2022 ರಲ್ಲೇ ಭಾರತ ಪ್ರವೇಶಿಸಿದ್ದ.. ನೇಹಾ ಎಂಬಾಕೆಯನ್ನು ಶಾರ್ಜಾದಲ್ಲಿ ವಿವಾಹವಾಗಿದ್ದ
Team Udayavani, Sep 1, 2023, 8:40 PM IST
ಹೈದರಾಬಾದ್ : ನಗರದಲ್ಲಿದ್ದ ಪತ್ನಿಯನ್ನು ಭೇಟಿಯಾಗಲೆಂದು ನವೆಂಬರ್ 2022 ರಲ್ಲಿ ನೇಪಾಳ ಗಡಿಯ ಮೂಲಕ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಪಾಕಿಸ್ಥಾನದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಪಾಕಿಸ್ಥಾನದ ಖೈಬರ್ ಪಖ್ತುಂಖ್ವಾ ಪ್ರದೇಶದಿಂದ ಬಂದ ಫೈಜ್ ಮೊಹಮ್ಮದ್ (24) ಮಾನ್ಯ ವೀಸಾ ಅಥವಾ ಪಾಸ್ಪೋರ್ಟ್ ಇಲ್ಲದೆ ಕಾಠ್ಮಂಡು ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸರಿಯಾದ ದಾಖಲೆಗಳಿಲ್ಲದೆ ವಾಸಿಸುತ್ತಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಕ್ರಮ ಕೈಗೊಂಡಿದ್ದೇವೆ. ಮೊಹಮ್ಮದ್ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹೈದರಾಬಾದ್ ದಕ್ಷಿಣ ವಲಯ ಡಿಸಿಪಿ ಪಿ ಸಾಯಿ ಚೈತನ್ಯ ತಿಳಿಸಿದ್ದಾರೆ.
ಫೈಜ್ ಮೊಹಮ್ಮದ್ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡಲು ಡಿಸೆಂಬರ್ 2019 ರಲ್ಲಿ ಶಾರ್ಜಾಕ್ಕೆ ಹೋಗಿದ್ದ, ಹೈದರಾಬಾದ್ನ ನೇಹಾ ಫಾತಿಮಾ (29) ಎಂಬ ಭಾರತೀಯ ಮಹಿಳೆಯನ್ನು ಭೇಟಿಯಾಗಿದ್ದ.ಮೊಹಮ್ಮದ್ ಫಾತಿಮಾಗೆ ಟೈಲರ್ ಆಗಿ ಕೆಲಸ ಮಾಡಲು ಸಹಾಯ ಮಾಡಿದ್ದು ಬಳಿಕ ಪ್ರೇಮಾಂಕುರವಾಗಿ ಇಬ್ಬರೂ ವಿವಾಹವಾದರು. ಫಾತಿಮಾಗೆ ಈಗ ಮೂರು ವರ್ಷದ ಗಂಡು ಮಗುವಿದೆ ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’