2020ರಲ್ಲಿ ಪಾಕ್‌ ಹುಚ್ಚಾಟ ಹೆಚ್ಚು: ಕದನ ವಿರಾಮ ಉಲ್ಲಂಘನೆ: 5,100 ಬಾರಿ ಗುಂಡು ಹಾರಾಟ

Team Udayavani, Dec 30, 2020, 1:32 AM IST

2020ರಲ್ಲಿ ಪಾಕ್‌ ಹುಚ್ಚಾಟ ಹೆಚ್ಚು: ಕದನ ವಿರಾಮ ಉಲ್ಲಂಘನೆ: 5,100 ಬಾರಿ ಗುಂಡು ಹಾರಾಟ

ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ಥಾನ ಪ್ರಸಕ್ತ ವರ್ಷ 5,100 ಬಾರಿ ಕದನ ವಿರಾಮ ಉಲ್ಲಂ ಸಿ ಗುಂಡು ಹಾರಿಸಿದೆ. ಇದರಿಂದಾಗಿ 24 ಮಂದಿ ಭದ್ರತಾ ಸಿಬಂದಿಯೂ ಸೇರಿ 36 ಮಂದಿ ಸಾವಿಗೀಡಾಗಿದ್ದಾರೆ ಮತ್ತು 130ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹದಿನೆಂಟು ವರ್ಷಗಳಿಗೆ ಹೋಲಿಕೆ ಮಾಡಿದರೆ ಇದು ಅತ್ಯಂತ ಗರಿಷ್ಠ ಪ್ರಮಾಣದ್ದು ಎಂದು ಸೇನೆಯ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 2003ರಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಮಾಡಿಕೊಂಡ ಕದನ ವಿರಾಮ ಜಾರಿಯಾದ ಬಳಿಕ ಗರಿಷ್ಠ ಪ್ರಮಾಣದ ಉಲ್ಲಂಘನೆ. ಪ್ರತೀ ದಿನ ಸರಾಸರಿ 14 ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ನಡೆದಿವೆ ಎಂದು ಸೇನೆಯ ಮತ್ತು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ಥಾನದ ಈ ಧೋರಣೆಯಿಂದಾಗಿ 2003ರ ಒಪ್ಪಂದ ಸುಸೂತ್ರವಾಗಿ ಜಾರಿಯಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸಕ್ತ ವರ್ಷ ಪಾಕಿಸ್ಥಾನ ನಡೆಸಿರುವ ಒಪ್ಪಂದ ಉಲ್ಲಂಘನೆಯನ್ನು 2017ನೇ ವರ್ಷಕ್ಕೆ ಹೋಲಿಕೆ ಮಾಡಿದರೆ ಐದು ಪಟ್ಟು ಹೆಚ್ಚಾಗಿದೆ. ಆ ವರ್ಷ 971 ಪ್ರಕರಣಗಳಲ್ಲಿ 31 ಮಂದಿ ಅಸುನೀಗಿ, 151 ಮಂದಿ ಗಾಯಗೊಂಡಿದ್ದರು.

2019ರಲ್ಲಿ 3, 289 ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ನಡೆದಿವೆ. ಈ ಪೈಕಿ 1,565 ಪ್ರಕರಣಗಳು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ನಡೆದಿವೆ. 2018ರಲ್ಲಿ 2,936 ಘಟನೆಗಳು ನಡೆದಿವೆ. ಅಂದರೆ ಸರಾಸರಿ ದಿನಕ್ಕೆ ಎಂಟು ಪ್ರಕರಣಗಳು ನಡೆದಿವೆ. ಆ ವರ್ಷ 61 ಮಂದಿ ಅಸುನೀಗಿ, 250 ಮಂದಿ ಗಾಯಗೊಂಡಿದ್ದಾರೆ. 2004, 2005 ಮತ್ತು 2006ರಲ್ಲಿ ಯಾವುದೇ ಉಲ್ಲಂಘನೆ ಪ್ರಕರಣ ನಡೆದಿರಲಿಲ್ಲ. ಗಡಿ ಪ್ರದೇಶದಲ್ಲಿ ನೆಲೆಸಿರುವ ಜಮ್ಮು, ಕಥುವಾ, ಕುಪ್ವಾರಾ ಮತ್ತು ಬಾರಾಮುಲ್ಲಾ, ಸಾಂಬಾ, ರಜೌರಿ ಮತ್ತು ಪೂಂಛ… ಜಿಲ್ಲೆಗಳಲ್ಲಿ ಪಾಕಿಸ್ಥಾನ ಯೋಧರು ಹಾರಿಸುವ ಗುಂಡಿನಿಂದ ತೀವ್ರ ಪ್ರಮಾಣದಲ್ಲಿ ತೊಂದರೆಗೆ ಒಳಗಾಗುತ್ತಿದ್ದಾರೆ. ಪಾಕಿಸ್ಥಾನದ ಜತೆಗೆ ಭಾರತ 3,232 ಕಿ.ಮೀ. ಗಡಿ ಪ್ರದೇಶ ಹೊಂದಿಕೊಂಡಿದೆ. ಈ ಪೈಕಿ 221 ಕಿ.ಮೀ. ಅಂತಾರಾಷ್ಟ್ರೀಯ ಗಡಿ, 740 ಕಿಮೀ ಎಲ್‌ಒಸಿ ವ್ಯಾಪ್ತಿಯಲ್ಲಿದೆ.

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.