
ಪಣಜಿ: ಚೋರ್ಲಾ ಘಾಟ್‍ನಲ್ಲಿ ಕಂದಕಕ್ಕೆ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ
Team Udayavani, Dec 2, 2022, 4:16 PM IST

ಪಣಜಿ: ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಚೋರ್ಲಾ ಘಾಟ್‍ನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ ಕಾರೊಂದು ಡಿ.1ರ ರಾತ್ರಿ ಚೋರ್ಲಾ ಘಾಟ್‍ನಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಚೋರ್ಲಾ ಘಾಟ್‍ನಲ್ಲಿ ಕಾರು ಆಳವಾದ ಕಂದಕಕ್ಕೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಮೂಲದ ನೂರ್ ಶೇಖ್ ಮತ್ತು ಸುಧೀರ್ ಕುಮಾರ್ ಮೃತಪಟ್ಟವರು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಗಾಯಾಳುಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದ ಚೋರ್ಲಾ ಘಾಟ್‍ನಲ್ಲಿ ಅಪಘಾತಗಳು ನಿಂತಿಲ್ಲ. ನಾನಾ ಅವಘಡಗಳಿಂದ ಈ ಘಾಟ್ ಮೃತ್ಯುಕೂಪವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಅಪಘಾತ ಸಂಭವಿಸುತ್ತಲೇ ಇದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್ ಸರ್ಕಾರದ ಟ್ವಿಟರ್ ಖಾತೆಗೆ ಮತ್ತೆ ತಡೆ