ನೀತಿ ಆಯೋಗದ ನೂತನ ಸಿಇಒ ಆಗಿ ಪರಮೇಶ್ವರನ್ ಅಯ್ಯರ್ ನೇಮಕ
Team Udayavani, Jun 24, 2022, 10:30 PM IST
ನವದೆಹಲಿ: ನೀತಿ ಆಯೋಗಕ್ಕೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಪರಮೇಶ್ವರ್ ಅಯ್ಯರ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಆಗಿ ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರವು ಈ ಕುರಿತು ಶುಕ್ರವಾರ ಪ್ರಕಟಣೆ ಹೊರಡಿಸಿದೆ. ಪರಮೇಶ್ವರ್ ಅವರು ಉತ್ತರ ಪ್ರದೇಶ ಕೇಡರ್‌ನ 1981ನೇ ಐಎಎಸ್ ಬ್ಯಾಚ್ ಅಧಿಕಾರಿ.
ಪರಮೇಶ್ವರ್ ಅವರು ನೈರ್ಮಲ್ಯ ತಜ್ಞರಾಗಿಯೇ ಪ್ರಸಿದ್ಧರಾದವರು. 2016ರಿಂದ 2020ರವರೆಗೆ ಪ್ರಧಾನಿ ಮೋದಿ ಸರ್ಕಾರದ “ಸ್ವತ್ಛ ಭಾರತ ಅಭಿಯಾನ’ವನ್ನು ಮುನ್ನಡೆಸುವ ಮೂಲಕ ಹೆಸರುವಾಸಿಯಾಗಿದ್ದರು. ವಿಶ್ವಸಂಸ್ಥೆಯಲ್ಲಿ ಗ್ರಾಮೀಣ ಜಲ ನೈರ್ಮಲ್ಯ ತಜ್ಞರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಇದೇ ವೇಳೆ ಭಾರತದ ಗುಪ್ತಚರ ಇಲಾಖೆಗೆ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕ ಅವರನ್ನು ನೇಮಕ ಮಾಡಲಾಗಿದೆ. ಈವರೆಗೆ ಇಲಾಖೆಯ ವಿಂಗ್ ಆಪರೇಷನ್‌ಗಳನ್ನು ನಿರ್ವಹಿಸುತ್ತಿದ್ದ ತಪನ್ ಅವರು 2 ವರ್ಷಗಳ ಕಾಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ಹಿಮಾಚಲದ 1988ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಹಾಗೆಯೇ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ(ರಾ)ದ ಮುಖ್ಯಸ್ಥಾಗಿರುವ ಸಮಂತ್ ಗೋಯೆಲ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಕಾಲ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK
ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ