ಸಹೋದ್ಯೋಗಿಯಿಂದ ಗುಂಡಿನ ದಾಳಿ: ಕರ್ತವ್ಯದಲ್ಲಿದ್ದ ಇಬ್ಬರು ಐಆರ್‌ಬಿ ಯೋಧರ ಸಾವು
Team Udayavani, Nov 27, 2022, 9:02 AM IST
ಅಹ್ಮದಾಬಾದ್ : ಯೋಧನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಗುಜರಾತ್ ನ ಪೋರಬಂದರ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಪೊಲೀಸ್ ವರದಿಯ ಪ್ರಕಾರ ಆರೋಪಿಯನ್ನು ಕಾನ್‌ಸ್ಟೆಬಲ್ ಎಸ್. ಇನೌಚಾಸಿಂಗ್ ಎಂದು ಗುರುತಿಸಲಾಗಿದ್ದು, ಕೊಲೆಯಾದ ಇಬ್ಬರು ಜವಾನರಾದ ತೊಯ್ಬಾ ಸಿಂಗ್ ಮತ್ತು ಜಿತೇಂದ್ರ ಸಿಂಗ್. ಗಾಯಗೊಂಡವರು ಕಾನ್‌ಸ್ಟೆಬಲ್‌ಗಳಾದ ಚೋರಜಿತ್ ಮತ್ತು ರೋಹಿಕಾನಾ. ಇವರೆಲ್ಲರೂ ಮಣಿಪುರಕ್ಕೆ ಸೇರಿದವರು.
ಶನಿವಾರ ಸಂಜೆ ಸಹೋದ್ಯೋಗಿಗಳ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ ಅದು ವಿಕೋಪಕ್ಕೆ ತಿರುಗಿ ತನ್ನಲ್ಲಿದ್ದ ಎಕೆ – 47 ರೈಫಲ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಗಾಯಾಳುಗಳನ್ನು ಪೋರಬಂದರ್ ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆರೋಪಿ ಎಸ್. ಇನೌಚಾಸಿಂಗ್ ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಗುಜರಾತ್ ನಲ್ಲಿ ಡಿಸೆಂಬರ್ ತಿಂಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು ಅದಕ್ಕಾಗಿ ಭದ್ರತಾ ಸಿಬ್ಬಂಧಿಗಳು ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ: ಬಣಕಲ್: 800 ಕಿ.ಮೀ. ಕ್ರಮಿಸಿ ಶಬರಿಮಲೆಗೆ ಪಾದಯಾತ್ರೆ ಮಾಡಲು ಭಕ್ತನ ಪಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ
ಬಾಹ್ಯಾಕಾಶ ಪ್ರವಾಸೋದ್ಯಮ ಕೈಗೆತ್ತಿಕೊಳ್ಳಲು ಇಸ್ರೋ ಅಧ್ಯಯನ: ಕೇಂದ್ರ ಸರ್ಕಾರ
ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
ಭಾರತದ ಪ್ರದೇಶದೊಳಗೆ ನುಸುಳಿಬಂದ ಪಾಕ್ ಡ್ರೋನನ್ನು ಹೊಡೆದುರುಳಿಸಿದ ಬಿಎಸ್ಎಫ್
ಸ್ಮೃತಿ ಇರಾನಿ ಮಗಳು ಶಾನೆಲ್ಲೆ ಇರಾನಿಯ ವಿವಾಹ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ