ಇಂದು ಪರೀಕ್ಷಾ ಪೆ ಚರ್ಚಾ:ಮೋದಿ ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Team Udayavani, Jan 20, 2020, 9:30 AM IST

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ನಡೆಸುವ ಪರೀಕ್ಷಾ ಪೆ ಚರ್ಚಾ ಈ ಬಾರಿ ಇಂದು ಹೊಸದಿಲ್ಲಿಯಲ್ಲಿ ನಡೆಯಲಿದೆ.

ಇಂದಿನ ಪರಿಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಹತ್ತಿರ ಬರುತ್ತಿರವ ಕಾರಣ ಅವರಲ್ಲಿನ ಮಾನಸಿಕ ಒತ್ತಡವನ್ನು ನಿವಾರಿಸಿ, ಅವರಲ್ಲಿ ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ಎದುರಿಸಲು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ನಡೆಸುತ್ತಿದ್ಧಾರೆ.

ನರೇಂದ್ರ ಮೋದಿಯವರು 2017ರಲ್ಲಿ ಜಾರಿಗೆ ತಂದ ಕಾರ್ಯಕ್ರಮವನ್ನು ಮೂರನೇ ಬಾರಿಗೆ ನಡೆಸುತ್ತಿದ್ದಾರೆ. ಈ ಬಾರಿಯ ಹೊಸದಿಲ್ಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.

ಸಚಿವ ಸುರೇಶ್ ಕುಮಾರ್ ಅವರು ಕೂಡಾ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೊಂದಿಗೆ ವೀಕ್ಷಿಸಲಿದ್ದಾರೆ. ಸುಮಾರು 500 ಸರಕಾರಿ , ಅನುದಾನಿತ ಮತ್ತು ಇತರ ಶಾಲೆಗಳ ಮಕ್ಕಳ ಜೊತ ರಾರಾಜಿನಗರದ ಕೆಎಲ್ ಇ ಶಾಲಾ ಸಭಾಂಗಣದಲ್ಲಿ ವೀಕ್ಷಿಸಲಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ