ಜ. 27ರಂದು ಪ್ರಧಾನಿ ಮೋದಿ ಜತೆ ಪರೀಕ್ಷಾ ಪೇ ಚರ್ಚಾ ಸಂವಾದ
Team Udayavani, Jan 3, 2023, 10:05 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಲಿರುವ ವಾರ್ಷಿಕ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ಈ ಬಾರಿ ಜನವರಿ 27ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಮಂಗಳವಾರ ತಿಳಿಸಿದೆ.
ಹೊಸದಿಲ್ಲಿಯ ತಲ್ಕಟೋರಾ ಒಳಾಂಗಣ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜತೆಗೆ ಮೋದಿ ಸಂವಾದ ನಡೆಸಲಿದ್ದಾರೆ.
ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳೊಂದಿಗಿನ ಪ್ರಧಾನಿ ಅವರ ಸಂವಾದವನ್ನು 2018ರಲ್ಲಿ ನಡೆಸಲಾಗಿತ್ತು.