ಸಂಸತ್ ಭವನ ಪ್ರವೇಶಿಸಲು ಯತ್ನ : ಚಾಕುಧಾರಿ ವ್ಯಕ್ತಿ ಸೆರೆ

Team Udayavani, Sep 2, 2019, 12:10 PM IST

ನವದೆಹಲಿ: ಬೈಕ್ ಮೂಲಕ ಬಂದು ಸಂಸತ್ ಭವನದೊಳಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಂಸತ್ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಶಂಕಿತ ವ್ಯಕ್ತಿಯ ಬಳಿ ಚಾಕು ಪತ್ತೆಯಾಗಿದೆ.

ಶಂಕಿತ ವ್ಯಕ್ತಿ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಮತ್ತು ಅತ್ಯಾಚಾರ ಆರೋಪದಲ್ಲಿ ಜೈಲುಪಾಲಾಗಿರುವ ರಾಂ ರಹೀಮ್ ನ ಬೆಂಬಲಿಗನಾಗಿದ್ದಾನೆ ಎಂಬ ಮಾಹಿತಿ ಪ್ರಾಥಮಿಕ ಮೂಲಗಳಿಂದ ಲಭ್ಯವಾಗಿದೆ.


ಸಂಸತ್ ಭವನದ ಆವರಣದೊಳಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಸಾಗರ್ ಎಂದು ಗುರುತಿಸಲಾಗಿದೆ. ಈತ ದೆಹಲಿಯ ಲಕ್ಷ್ಮೀನಗರದ ನಿವಾಸಿಯಾಗಿದ್ದಾನೆ. ಸಂಸತ್ ಭವನದ ಗೇಟ್ ಸಂಖ್ಯೆ 01ರ ಬಳಿ ತನ್ನ ಬೈಕ್ ಅನ್ನು ನಿಲ್ಲಿಸಿ ಕೈಯಲ್ಲಿ ಚಾಕು ಹಿಡಿದುಕೊಂಡು ಸಂಸತ್ ಆವರಣದೊಳಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಮತ್ತು ಈ ಸಂದರ್ಭದಲ್ಲಿ ಆತ ರಾಮ್ ರಹೀಂ ಪರವಾಗಿ ಘೋಷಣೆಯನ್ನು ಕೂಗುತ್ತಿದ್ದ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ