
ಎಸ್‌ಎಸ್‌ಸಿ ಹಗರಣ: ಪಾರ್ಥ, ಅರ್ಪಿತಾಗೆ 14 ದಿನಗಳ ನ್ಯಾಯಾಂಗ ಬಂಧನ
Team Udayavani, Aug 5, 2022, 8:35 PM IST

ಕೋಲ್ಕತಾ: ಎಸ್‌ಎಸ್‌ಸಿ ಹಗರಣ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ವಿಶೇಷ ನ್ಯಾಯಾಲಯ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ನ್ಯಾಯಾಧೀಶ ಜಿಬೋನ್ ಕುಮಾರ್ ಸಾಧು ಅವರು ಜಾರಿ ನಿರ್ದೇಶನಾಲಯದ (ಇಡಿ) ಕೋರಿಕೆಯ ಮೇರೆಗೆ ಚಟರ್ಜಿ ಮತ್ತು ಮುಖರ್ಜಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.
ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಆಗಸ್ಟ್ 18 ರಂದು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದಾಗ ಇಬ್ಬರೂ ಆರೋಪಿಗಳನ್ನು ಹಾಜರುಪಡಿಸುವಂತೆ ಸೂಚಿಸಿದೆ.
ಇಬ್ಬರು ಆರೋಪಿಗಳಿಂದ ಇಡಿ ಅಪಾರ ಪ್ರಮಾಣದ ನಗದು, ಚಿನ್ನ, ಆಸ್ತಿ, ಬ್ಯಾಂಕ್ ಖಾತೆಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಮತ್ತು ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಗಮನಿಸಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
