ಮುಕೇಶ್ ಅಂಬಾನಿ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಅದ್ಧೂರಿ ಅರಂಗೇಟ್ರಂ
Team Udayavani, Jun 6, 2022, 11:54 PM IST
ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿಯ ವರು ರವಿವಾರ ತಮ್ಮ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಅವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದ ಫೋಟೋ, ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮುಂಬಯಿಯ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ನ ಹಲವು ಸೆಲೆ ಬ್ರಿಟಿಗಳು ಭಾಗ ವಹಿಸಿದ್ದರು. ಉದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಹಾಗೂ ಮುಕೇಶ್ ಅವರ ಪುತ್ರ ಅನಂತ್ ಅಂಬಾನಿ ನಿಶ್ಚಿತಾರ್ಥ 2019ರಲ್ಲಿಯೇ ನೆರವೇರಿದೆ.
ರಾಧಿಕಾ ಅವರು ನೀತಾ ಅಂಬಾ ನಿಯವರೊಂದಿಗೆ ಅನೇಕ ಕಾರ್ಯ ಕ್ರಮಗಳಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದಾರೆ.