
ಬಿಬಿಸಿ ಸಾಕ್ಷ್ಯಚಿತ್ರ: ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ
Team Udayavani, Jan 29, 2023, 7:48 PM IST

ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿ ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.
ವಕೀಲ ಎಂ.ಎಲ್. ಶರ್ಮಾ ಎಂಬವರು ಪಿಐಎಲ್ ಸಲ್ಲಿಸಿದ್ದು, “ಬಿಬಿಸಿ ಸಾಕ್ಷ್ಯಚಿತ್ರದ ಭಾಗ 1 ಮತ್ತು 2 ಅನ್ನು ಪರಿಶೀಲಿಸಿ, ಗುಜರಾತ್ ಗಲಭೆಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಭಾಗಿಯಾದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಜತೆಗೆ, ಸಾಕ್ಷ್ಯಚಿತ್ರವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದು ಮಾಡುವಂತೆಯೂ ಕೋರಿದ್ದಾರೆ. ಸಂವಿಧಾನದ 352ನೇ ವಿಧಿಯಡಿ ರಾಷ್ಟ್ರಪತಿಯವರು ತುರ್ತು ಪರಿಸ್ಥಿತಿ ಘೋಷಿಸದಿದ್ದರೂ, ತುರ್ತು ಪರಿಸ್ಥಿತಿಯ ನಿಬಂಧನೆಗಳನ್ನು ಬಳಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆಯೇ ಎಂದೂ ಅರ್ಜಿದಾರರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!