ಪ್ರಮೋದ್ ಕುಮಾರ್ ಮಿಶ್ರಾ ಪ್ರಧಾನಿ ಮೋದಿಯ ನೂತನ ಪ್ರಿನ್ಸಿಪಲ್ ಸೆಕ್ರೆಟರಿ

Team Udayavani, Sep 11, 2019, 3:03 PM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಪ್ರಿನ್ಸಿಪಲ್ ಸೆಕ್ರೆಟರಿಯನ್ನಾಗಿ ಪ್ರಮೋದ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕೇಂದ್ರ ಸರಕಾರದಲ್ಲಿ ಕಳೆದ ಐದು ವರ್ಷಗಳ ಕಾಲ ಪ್ರಧಾನಿ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದ ನೃಪೇಂದ್ರ ಮಿಶ್ರಾ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಿಶ್ರಾ ಅವರು ಗುಜರಾತ್ ಕೆಡರ್ ನ 1972ರ ಬ್ಯಾಚ್ ನ ಐಎಎಸ್ ಅಧಿಕಾರಿ. ಇವರು ಮೊದಲು ಪ್ರಧಾನ ಮಂತ್ರಿಯ ಹೆಚ್ಚುವರಿ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಆ್ಯಗ್ರಿಕಲ್ಚರ್ ಅಂಡ್ ಕಾರ್ಪೋರೇಶನ್ ಸೆಕ್ರೆಟರಿ, ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಮಿಶ್ರಾ ಅವರು ಮೇ ತಿಂಗಳಿನಲ್ಲಿ ಎಕಾನಾಮಿಕ್ಸ್ ಅಂಡ್ ಡೆವಲಪ್ ಮೆಂಟ್ ಸ್ಟಡೀಸ್ ನಲ್ಲಿ ಇಂಗ್ಲೆಂಡ್ ನ ಸುಸ್ಸೆಕ್ಸ್ ಯೂನಿರ್ವಸಿಟಿಯಿಂದ ಪಿಎಚ್ ಡಿ ಪದವಿ ಪಡೆದಿದ್ದರು. ಅಲ್ಲದೇ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತಿಷ್ಠಿತ ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾಗಿದ್ದರು.

ಏತನ್ಮಧ್ಯೆ ಪ್ರಧಾನ ಮಂತ್ರಿ ಕಚೇರಿಯ ವಿಶೇಷ ಕರ್ತವ್ಯ ನಿರ್ವಹಣೆ ಅಧಿಕಾರಿಯಾದ ಪಿಕೆ ಸಿನ್ನಾ ಅವರನ್ನು ಪ್ರಧಾನಮಂತ್ರಿಯ ಪ್ರಿನ್ಸಿಪಲ್ ಅಡ್ವೈಸರ್ ಆಗಿ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ