ಇ-ಕಾಮರ್ಸ್ಗಳ ಪ್ಲಾಸ್ಟಿಕ್ ಬಳಕೆಗೆ ತಡೆ
Team Udayavani, Oct 22, 2019, 8:08 PM IST
ನವದೆಹಲಿ: ಪ್ಯಾಕೇಜಿಂಗ್ ಅತಿಯಾದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ಗೆ ನಿರ್ದೇಶನ ನೀಡುವಂತೆ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮನವಿ ಮಾಡಿಕೊಂಡಿದ್ದಾನೆ. ಈ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಮಂಗಳವಾರ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವರದಿಯನ್ನು ಕೋರಿದೆ.
ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಮಾಲಿನ್ಯ ಮೇಲ್ವಿಚಾರಣ ಸಂಸ್ಥೆಗೆ ನಿರ್ದೇಶನ ನೀಡಿದೆ. ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿತರಿಸುವ ಸರಕುಗಳನ್ನು ಪ್ಯಾಕಿಂಗ್ ಮಾಡುವ ವೇಳೆ ಅತಿಯಾದ ಪ್ಲಾಸ್ಟಿಕ್ ಬಳಸಲಾಗುತ್ತದೆ. ಇದನ್ನು ನಿಲ್ಲಿಸಲು ನಿರ್ದೇಶಿಸುವಂತೆ 16 ರ್ಷದ ಆದಿತ್ಯ ದುಬೆ ಎಂಬವರು ಎನ್ಜಿಟಿಗೆ ಮನವಿ ಮಾಡಿದ್ದರು.
ಇ-ಕಾಮರ್ಸ್ ಕಂಪೆನಿಗಳು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು, 2016ರ ವ್ಯಾಪ್ತಿಗೆ ಒಳಪಡುತ್ತದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ