ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಇಂದು ಮಹತ್ವದ ಚರ್ಚೆ! ಲಾಕ್ ಡೌನ್ ಭವಿಷ್ಯ ನಿರ್ಧಾರ ?
Team Udayavani, Apr 27, 2020, 8:28 AM IST
ಬೆಂಗಳೂರು: ದೇಶಾದ್ಯಂತ ಕೋವಿಡ್ 19 ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು (ಸೋಮವಾರ ಏ.27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ಕೋವಿಡ್ 19 ತಹಬದಿಗೆ ಬಾರದ ಕಾರಣ ಲಾಕ್ಡೌನ್ ಎರಡನೇ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಅದಾಗ್ಯೂ ಇಂದಿನ ಸಭೆಯಲ್ಲಿ ಮೇ 3ರ ಬಳಿಕ ಲಾಕ್ಡೌನ್ ವಿಸ್ತರಣೆ ಮಾಡಬೇಕೋ ಅಥವಾ ಬೇಡವೋ ? ಲಾಕ್ ಡೌನ್ ನಿಂದ ಹಂತಹಂತವಾಗಿ ಹೊರಬರುವ ಮಾರ್ಗಗಳು ಮತ್ತು ಪ್ರಸ್ಥುತ ಕೈಗೊಂಡಿರುವ ಕಾರ್ಯಗಳ ಬಗ್ಗೆ ಸಂವಾದ ನಡೆಸಲಿದ್ದಾರೆ.
ಕೋವಿಡ್ 19 ಮಾಹಾಮಾರಿ ಆರಂಭಗೊಂಡಾಗಿನಿಂದ ಪ್ರಧಾನಿ, ಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಮೂರನೇ ವಿಡಿಯೋ ಕಾನ್ಫರೆನ್ಸ್ ಇದಾಗಿದೆ. ಈ ಸಂವಾದ ಬೆಳಗ್ಗೆ 11 ಗಂಟೆ ಸುಮಾರಿಗೆ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕೋವಿಡ್ ಅಟ್ಟಹಾಸಕ್ಕೆ ನಲುಗಿರುವ ಕೆಲವು ರಾಜ್ಯಗಳು ಲಾಕ್ ಡೌನ್ ಅವಧಿಯನ್ನು ಇನ್ನು ಕೆಲವು ದಿನಗಳ ಕಾಲ ಮುಂದುವರಿಸುವಂತೆ ಸಲಹೆ ನೀಡುವ ಸಾಧ್ಯತೆಯಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು