ಆಗ್ರಾ: 2,980 ಕೋಟಿ ರೂ. ಪೌರ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Team Udayavani, Jan 9, 2019, 12:18 PM IST
ಆಗ್ರಾ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಆಗ್ರಾದಲ್ಲಿ 2,980 ಕೋಟಿ ರೂ.ಗಳ ಪೌರ ಯೋಜನೆಗಳಿಗೆ ಚಾಲನೆ ನೀಡಿದರು.
ಆಗ್ರಾ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ನ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ನ ಕುಡಿಯುವ ನೀರು ಪೂರೈಕೆ ಯೋಜನೆಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೇರವೇರಿಸಿದರು.
ಆಧುನಿಕ ವಿಶ್ವಮಟ್ಟದ ನಗರವಾಗಿ ಪ್ರವಾಸೋದ್ಯಮವನ್ನು ಅಭಿವೃದ್ದಿ ಪಡಿಸುವುದು ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಉದ್ದೇಶವಾಗಿದೆ.
ಕುಡಿಯುವ ನೀರು ಪೂರೈಕೆಯ ಗಂಗಾ ಜಲ ಯೋಜನೆಯು ಆಗ್ರಾ ನಗರವಾಸಿಗಳಿಗ ಮತ್ತು ಪ್ರವಾಸಿಗರಿಗೆ ಉತ್ತಮ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಆಗ್ರಾದ ಎಸ್ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹೆರಿಗೆ ವಿಭಾಗವನ್ನು ನೂರು ಹಾಸಿಗೆಗಳ ಘಟಕವಾಗಿ ಮೇಲ್ಮಟ್ಟಕ್ಕೇರಿಸುವ ಯೋಜನೆಗೂ ಪ್ರಧಾನಿ ಮೋದಿ ಚಾಲನೆ ನೀಡಿದರು.
ಪ್ರಧಾನಿ ಮೋದಿ ಅವರು 2016ರಲ್ಲಿ ಆಗ್ರಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಿಎಂ ಆವಾಸ್ ಯೋಜನೆ (ಗ್ರಾಮೀಣ) ಗೆ ಚಾಲನೆ ನೀಡಿದ್ದರು. ಈ ಯೋಜನೆಯಡಿ 65 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಇದರಲ್ಲಿ 9.2 ಲಕ್ಷ ಮನೆಗಳು ಉತ್ತರ ಪ್ರದೇಶದಲ್ಲಿ ನಿರ್ಮಿಸಲ್ಪಡುವುದು ಕೂಡ ಸೇರಿದೆ.