ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ
Team Udayavani, Apr 22, 2021, 9:46 PM IST
ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು 10 ರಾಜ್ಯಗಳ ಸಿಎಂಗಳ ಜೊತೆ ಸಭೆ ಕರೆದಿದ್ದಾರೆ.
ನಾಳೆ ( ಏಪ್ರಿಲ್ 23, ಶುಕ್ರವಾರ) ಬೆಳಿಗ್ಗೆ 10 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಕಳೆದರೆಡು ದಿನಗಳ ಹಿಂದೆಯಷ್ಟೇ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ವಿರುದ್ಧ ಹೋರಾಟಕ್ಕೆ ಸಹಕರಿಸುವಂತೆ ದೇಶದ ಜನತೆಯನ್ನು ಕೇಳಿಕೊಂಡಿದ್ದರು. ಹಾಗೂ ಲಾಕ್ ಡೌನ್ ಕೊನೆಯ ಅಸ್ತ್ರವಾಗಬೇಕೆಂದು ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದರು.
ಇನ್ನು ದೇಶದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.
ನಾಳೆ, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರು ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಶ್ರೀ @BSYBJP ರವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.@PMOIndia
— CM of Karnataka (@CMofKarnataka) April 22, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
Sandeshkhali ಪ್ರಕರಣಕ್ಕೆ ದಿಢೀರ್ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್!
BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್
Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!
MUST WATCH
ಹೊಸ ಸೇರ್ಪಡೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ