
ಗುಜರಾತ್ ಚುನಾವಣೆ: ಸೂರತ್‌ನಲ್ಲಿ ಪ್ರಧಾನಿ ಮೋದಿ, ಅರವಿಂದ್ ಕೇಜ್ರಿವಾಲ್ ಕೊನೆಯ ಸುತ್ತಿನ ಪ್ರಚಾರ
Team Udayavani, Nov 27, 2022, 11:21 AM IST

ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಪಕ್ಷದ ಪ್ರಮುಖ ನಾಯಕರೊಂದಿಗೆ ಪ್ರಚಾರಕ್ಕೆ ಹೊರಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಇಂದು ‘ವಜ್ರ ನಗರಿ’ ಸೂರತ್‌ಗೆ ಭೇಟಿ ನೀಡಲಿದ್ದಾರೆ.
ಇದು ರಾಜ್ಯದ 182 ಸದಸ್ಯ ಬಲದ ವಿಧಾನಸಭೆಗೆ 12 ಶಾಸಕರನ್ನು ಕಳುಹಿಸುತ್ತಿದ್ದು ಮತ್ತು ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಸೂರತ್ ಸಾಂಪ್ರದಾಯಿಕವಾಗಿ ಆಡಳಿತಾರೂಢ ಬಿಜೆಪಿಯತ್ತ ಹೆಚ್ಚಿನ ಒಲವು ತೋರುತ್ತಿದೆ, ಜವುಳಿ ಮತ್ತು ವಜ್ರದ ವ್ಯಾಪಾರಿಗಳು ಪಕ್ಷವನ್ನು ಬೆಂಬಲಿಸಿದ್ದಾರೆ, ಜೊತೆಗೆ ವ್ಯಾಪಾರ ಕೇಂದ್ರದಲ್ಲಿರುವ ಕ್ಷೇತ್ರಗಳೊಂದಿಗೆ ಸಂಬಂಧಿಸಿದ ಲಕ್ಷಾಂತರ ಜನರು ಬಿಜೆಪಿಯತ್ತ ಹೆಚ್ಚಿನ ಒಲವನ್ನು ತೋರಿದ್ದಾರೆ ಎನ್ನಲಾಗಿದೆ.
ವಿಮಾನ ನಿಲ್ದಾಣದಿಂದ ಸಭೆ ನಡೆಯುವ ಸ್ಥಳದ ವರೆಗೆ ಸುಮಾರು 25 ಕಿಮೀ ರೋಡ್ ಶೋ ನಡೆಯಲಿದೆ ನಂತರ ಸೂರತ್‌ನ ಮೋಟಾ ವರಾಚಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತಿಳಿಸಿದೆ.
ಅದರಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಟರ್ಗಾಂನಲ್ಲಿ ರೋಡ್ ಶೋ ನಡೆಸಿ ಬಳಿಕ ಜವುಳಿ ಉದ್ಯಮದ ಪ್ರಮುಖರು ಮತ್ತು ರತ್ನ ಕುಶಲಕರ್ಮಿಗಳೊಂದಿಗೆ ಟೌನ್‌ಹಾಲ್ ನಲ್ಲಿ ಸಭೆಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಯೋಗಿ ಆದಿತ್ಯನಾಥ್ ಚೌಕ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಒಟ್ಟಾರೆಯಾಗಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಎಲ್ಲಾ ಪಕ್ಷದ ನಾಯಕರು ಶಕ್ತಿ ಮೀರಿ ಪ್ರಚಾರ ಮಾಡುತ್ತಿದ್ದು ಅದೃಷ್ಟ ಲಕ್ಷ್ಮಿ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕಾದುನೋಡಬೇಕಾಗಿದೆ .
ಇದನ್ನೂ ಓದಿ: ರಾಜಕೀಯ ದ್ವೇಶ: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು: ಲಕ್ಷಾಂತರ ಮೀನು ಮಾರಣ ಹೋಮ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
