ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್ : ಮಹತ್ವದ ಸಭೆ ನಡೆಸಿದ ಮೋದಿ
Team Udayavani, Aug 17, 2021, 8:10 PM IST
ನವದೆಹಲಿ: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಭದ್ರತಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದರು.
ಇಂದು (ಆ.17) ಸಂಜೆ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಇಲಾಖೆ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲವಾದರೂ, ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ ಉಂಟಾಗುವ ಪರಿಣಾಮಗಳು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಮುಂದೆ ಬರಬಹುದಾದ ಪರಿಸ್ಥಿತಿ ಎದುರಿಸಲು ಸನ್ನದ್ಧತೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಆಫ್ಗಾನ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ, ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿನ್ನೆ ತಡರಾತ್ರಿಯವರೆಗೂ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ