ತಲಾಖ್‌ ವಿರುದ್ಧ ಹೋರಾಟ:ಮುಸ್ಲಿಂ ಮಹಿಳೆಯರಿಗೆ ಮೋದಿ ಪ್ರಶಂಸೆ

Team Udayavani, Aug 15, 2017, 11:03 AM IST

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೋಮ್ಮೆ ಸ್ವಾತಂತ್ರ್ಯ ದಿನದಂದು ತ್ರಿವಳಿ ತಲಾಖ್‌ ಕುರಿತು ತಮ್ಮ ಅಭಿಪ್ರಾಯ ಹೊರಹಾಕಿದ್ದು, ತ್ರಿವಳಿ ತಲಾಖ್‌ ವಿರುದ್ಧ ಹೋರಾಟ ನಡೆಸುತ್ತಿರುವ ಮಹಿಳೆಯರಿಗೆ ಇಡೀ ದೇಶ ಬೆಂಬಲ ನೀಡಬೇಕೆಂದು ಕರೆ ನೀಡಿದ್ದಾರೆ. .

71 ನೇ ಸ್ವಾತಂತ್ರ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾಡಿದ ಭಾಷಣದಲ್ಲಿ ಇಸ್ಲಾಂ ಧರ್ಮದಲ್ಲಿನ ತ್ರಿವಳಿ ತಲಾಖ್‌ ವಿಚಾರ ಪ್ರಸ್ತಾವಿಸಿದರು. ‘ತ್ರಿವಳಿ ತಲಾಖ್‌ ವಿರುದ್ಧ ಹೋರಾಡುತ್ತಿರುವ ಮಹಿಳೆಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ತ್ರಿವಳಿ ತಲಾಖ್‌ನಿಂದ ಶೋಚನೀಯ ಜೀವನ ನಡೆಸುತ್ತಿರುವ ಮಹಿಳೆಯರು ಹೋರಾಟಕ್ಕೆ ನಿಂತಿದ್ದು ಅನಿಷ್ಠ ಪದ್ದತಿಯ ವಿರುದ್ಧ ಇಡೀ ದೇಶವೇ ನಿಲ್ಲುವ ಪರಿಸ್ಥಿತಿ ಬಂದಿದೆ’ ಎಂದರು. 

‘ನಾನು ತ್ರಿವಳಿ ತಲಾಖ್‌ ವಿರುದ್ಧ ಹೋರಾಡುವ ಮಹಿಳೆಯರಿಗೆ ಹೇಳಬಯಸುವುದೇನೆಂದರೆ, ಇಡೀ ದೇಶ ನಿಮಗೆ ಬೆಂಬಲ ನೀಡುತ್ತದೆ. ಇದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಲಿದೆ’ ಎಂದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ