ಮಿತಿ ಮೀರುತ್ತಿರುವ Covid 19; ದೇಶದ ಜನತೆ ಉದ್ದೇಶಿಸಿ ಇಂದು ರಾತ್ರಿ 8ಗಂಟೆಗೆ ಪ್ರಧಾನಿ ಭಾಷಣ
ನಾನು ಇಂದು ರಾತ್ರಿ 8ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಕೋವಿಡ್ 19 ಸೋಂಕು ವಿಚಾರದ ಕುರಿತು ಮಾತನಾಡಲಿದ್ದೇನೆ ಎಂದು ಟ್ವೀಟ್
Team Udayavani, Mar 24, 2020, 2:37 PM IST
ನವದೆಹಲಿ: ಭಾರತ ಸೇರಿದಂತೆ ವಿಶ್ವಾದ್ಯಂತ ಕೋವಿಡ್ 19 ವೈರಸ್ ಅಟ್ಟಹಾಸ ಮಿತಿ ಮೀರತೊಡಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 8ಗಂಟೆಗೆ ಮತ್ತೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಾನು ಇಂದು ರಾತ್ರಿ 8ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಕೋವಿಡ್ 19 ಸೋಂಕು ವಿಚಾರದ ಕುರಿತು ಮಾತನಾಡಲಿದ್ದೇನೆ ಎಂದು ಟ್ವೀಟ್ ನಲ್ಲಿ ಮೋದಿ ವಿವರಿಸಿದ್ದಾರೆ.
ಕೋವಿಡ್ 19 ಕ್ಷಿಪ್ರವಾಗಿ ಹರಡುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಕಳೆದ ಗುರುವಾರದ ಬಳಿಕ ಇದೀಗ ಎರಡನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ದೇಶದ ಜನತೆ ಜನತಾ ಕರ್ಫ್ಯೂ ಮೂಲಕ ಕೋವಿಡ್ 19 ಹರಡುವಿಕೆ ತಡೆಗೆ ಮುಂದಾಗಬೇಕೆಂದು ಕರೆ ನೀಡಿದ್ದರು.
ಏತನ್ಮಧ್ಯೆ ದೇಶದ ಜನರು ಸ್ವಯಂ ಆಗಿ ಹೋಮ್ ಕ್ವಾರಂಟೈನ್ ಆಗಲು ಸಹಕಾರ ನೀಡದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 2ನೇ ಬಾರಿ ಭಾಷಣದಲ್ಲಿ ಪ್ರಧಾನಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…