
2023-24 ರ ಬಜೆಟ್: ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಿ
Team Udayavani, Dec 5, 2022, 4:52 PM IST

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2023-24 ರ ಕೇಂದ್ರ ಬಜೆಟ್‌ಗೆ ಮುಂಚಿತವಾಗಿ, ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ‘ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ’ದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸರಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ ಜನವರಿಯಲ್ಲಿ ದೆಹಲಿಯಲ್ಲಿ ನಡೆಯಲಿದೆ ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳ ಯುವ ಜಿಲ್ಲಾಧಿಕಾರಿಗಳು ಮತ್ತು ಮ್ಯಾಜಿಸ್ಟ್ರೇಟ್‌ಗಳು ಸೇರಿದಂತೆ ಹಲವಾರು ಅಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಸಂಸತ್ತಿನಲ್ಲಿ 2023-24ರ ಬಜೆಟ್ ಮಂಡಿಸಲಿದ್ದಾರೆ.
ಈ ವರ್ಷದ ಜೂನ್‌ನಲ್ಲಿ, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಪ್ರಧಾನ ಕಾರ್ಯದರ್ಶಿಗಳ ಮೊದಲ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
